ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್‌ ರೇಪ್‌

ಕೋಲ್ಕತ್ತಾ: ಒಡಿಶಾದ ಜಲೇಶ್ವರ ನಿವಾಸಿಯಾಗಿರುವ ಯುವತಿ, ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ.

ಯುವತಿ ವೈದ್ಯಕೀಯ ಕಾಲೇಜಿನಲ್ಲಿ ದ್ವೀತಿಯ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಳು. ಶುಕ್ರವಾರ(ಅ.10) ರಾತ್ರಿ ಸ್ನೇಹಿತನೊಂದಿಗೆ ಊಟಕ್ಕೆ ಹೋಗಿ ಮರಳುವ ವೇಳೆ ಘಟನೆ ನಡೆದಿದೆ.

ಸಂತ್ರಸ್ಥ ಯುವತಿ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವೈದ್ಯಕೀಯ ವಿದ್ಯಾರ್ಥಿನಿಯ ಕುಟುಂಬ ಸದಸ್ಯರು ಸಲ್ಲಿಸಿದ ದೂರಿನ ಆಧಾರದ ಮೇಲೆ ತನಿಖೆ ಆರಂಭಿಸಲಾಗಿದೆ. ಇಲ್ಲಿಯವರೆಗೆ ಈ ಸಂಪೂರ್ಣ ಪ್ರಕರಣದಲ್ಲಿ ಯಾರನ್ನೂ ಬಂಧಿಸಲಾಗಿಲ್ಲ.

ಸುದ್ದಿಗಾರರೊಂದಿಗೆ ಮಾತನಾಡಿದ ವಿದ್ಯಾರ್ಥಿನಿಯ ಪೋಷಕರು, ತಮ್ಮ ಮಗಳ ಸ್ನೇಹಿತರಿಂದ ಕರೆ ಬಂದ ನಂತರ ಇಂದು ಬೆಳಗ್ಗೆ ದುರ್ಗಾಪುರ ತಲುಪಿದ್ದೇವೆ ಎಂದು ಹೇಳಿದರು. ವಿದ್ಯಾರ್ಥಿನಿಯ ತಂದೆ ಮಾತನಾಡಿ, ನಮಗೆ ಅವಳ ಸ್ನೇಹಿತರಿಂದ ಕರೆ ಬಂತು ಮತ್ತು ಅವರು ಘಟನೆಯ ಬಗ್ಗೆ ಮಾಹಿತಿ ನೀಡಿದರು.

ನಾವು ಇಂದು ಬೆಳಗ್ಗೆ ಇಲ್ಲಿಗೆ ಬಂದು ಪೊಲೀಸ್ ದೂರು ದಾಖಲಿಸಿದ್ದೇವೆ. ಪ್ರಸ್ತುತ, ಪೊಲೀಸರು ಎಲ್ಲಾ ಸಂಭಾವ್ಯ ಕೋನಗಳಿಂದಲೂ ತನಿಖೆ ನಡೆಸುತ್ತಿದ್ದಾರೆ. ತನಿಖಾ ಅಧಿಕಾರಿಗಳು ಎಲ್ಲಾ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ ಮತ್ತು ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸುತ್ತಿದ್ದಾರೆ.

error: Content is protected !!