ವಿಜಯಪುರ: ಹಳೆಯ ವೈಷಮ್ಯದಿಂದ ಕಲ್ಲಿನಿಂದ ಜಜ್ಜಿ ಇಬ್ಬರು ಯುವಕರನ್ನ ಬರ್ಬರ ಹತ್ಯೆ ಮಾಡಿರುವ ಘಟನೆ ವಿಜಯಪುರ ತಾಲೂಕಿನ ಕನ್ನೂರು ಗ್ರಾಮದಲ್ಲಿ ಭಾನುವಾರ(ಅ.12) ರಾತ್ರಿ ನಡೆದಿದೆ.
ಸಾಗರ ಬೆಳುಂಡಗಿ (25) ಹಾಗೂ ಇಸಾಕ್ ಖುರೇಷಿ (24) ಕೊಲೆಯಾದ ಯುವಕರು. ಇನ್ನು
ಈ ಕೃತ್ಯ ಅಪರಿಚಿತರಿಂದ ನಡೆದಿದ್ದು, ಹತ್ಯೆಯ ನಂತರ ಹಂತಕರು ಪರಾರಿಯಾಗಿದ್ದಾರೆ. ಎರಡು ವರ್ಷಗಳ ಹಿಂದೆ ಈರನಗೌಡ ಎಂಬಾತನ ಮೇಲೆ ಇಸಾಕ್ ಖರೇಷಿ ಹಾಗೂ ಸಾಗರ ತೀವ್ರ ಹಲ್ಲೆ ಮಾಡಿದ್ದರು ಎನ್ನಲಾಗಿದೆ. ಕೆಲ ದಿನಗಳ ಕಾಲ ಚಿಕಿತ್ಸೆ ಪಡೆದು ಈರಣಗೌಡ ಮೃತಪಟ್ಟಿದ್ದನಂತೆ. ಈ ದ್ವೇಷದ ಕಾರಣ ಇಬ್ಬರ ಕೊಲೆ ನಡೆದಿರೋ ಸಂಶಯ ವ್ಯಕ್ತವಾಗಿದೆ.
ಸದ್ಯ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.