ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಪ್ರಕರಣದ ಮುಸುಕುದಾರಿ ಚಿನ್ನಯ್ಯನ ಎರಡನೇ ಪತ್ನಿ ಮಲ್ಲಿಕಾ ಇಂದು(ಅ.13) ಬೆಳಗ್ಗೆ 9:30 ಕ್ಕೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಹಾಜರಾಗಿದ್ದಾರೆ.
ಬುರುಡೆ ಚಿನ್ನಯ್ಯನಿಗೆ ಸಂಬಂಧಿಸಿದ ಕೆಲ ಮಾಹಿತಿಗಾಗಿ ಎಸ್.ಐ.ಟಿ ಅಧಿಕಾರಿಗಳು ಆತನ ಪತ್ನಿಯನ್ನು ವಿಚಾರಣೆಗಾಗಿ ಕರೆಸಿಕೊಳ್ಳಲಾಗಿದೆ ಎನ್ನಲಾಗಿದೆ.
ಮೃತದೇಹಗಳನ್ನು ಹೂಳಲಾಗಿದೆ ಎಂದು ಚಿನ್ನಯ್ಯ ತೋರಿಸಿದ್ದ ಸ್ಥಳಗಳಲ್ಲಿ ಪ್ರಮುಖ ಪ್ರದೇಶವಾದ ಬಂಗ್ಲೆಗುಡ್ಡೆ ಪ್ರದೇಶಕ್ಕೆ ಎಸ್.ಐ.ಟಿ ಅಧಿಕಾರಿಗಳು ಇತ್ತೀಚೆಗೆ ಮತ್ತೆ ಭೇಟಿಯಾಗಿ ಶೋಧ ಕಾರ್ಯ ನಡೆಸಿದ್ದರು.
ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆ ಪ್ರದೇಶಕ್ಕೆ ಅ.6 ರಂದು ಮಧ್ಯಾಹ್ನ 1 ಗಂಟೆಗೆ ಎಸ್.ಐ.ಟಿ ಅಧಿಕಾರಿಗಳು ಬೆಳ್ತಂಗಡಿ ಅರಣ್ಯ ಇಲಾಖೆ ಅಧಿಕಾರಿಗಳನ್ನು ಕರೆದುಕೊಂಡು ಬಂದು ಸರ್ವೆ ಕಾರ್ಯ ನಡೆಸಿದ್ದಾರೆ.