ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬನ ಚೆಕ್-ಇನ್ ಬ್ಯಾಗೇಜ್‌ನಲ್ಲಿ ಹೈಡ್ರೋಪೋನಿಕ್ ಗಾಂಜಾ ಸಾಗಿಸುತ್ತಿರುವುದು ಸೋಮವಾರ(ಅ.13) ಕಂಡುಬಂದಿದ್ದು, ಸಿಐಎಸ್‌ಎಫ್ ಆತನನ್ನು ಬಂಧಿಸಿದೆ.
ಮೂಲಗಳ ಪ್ರಕಾರ, ಅಕ್ಟೋಬರ್ 13 ರಂದು ಸಂಜೆ 6.10 ಕ್ಕೆ ಮುಂಬೈನಿಂದ ಇಂಡಿಗೋ ವಿಮಾನದಲ್ಲಿ ಬಂದ ಶಂಕರ್ ನಾರಾಯಣ್ ಪೊದ್ದಾರ್ ಎಂಬ ಪ್ರಯಾಣಿಕನ ಬಳಿ ಮಾದಕ ವಸ್ತುಗಳು ಇರಬಹುದು ಎಂಬ ಮಾಹಿತಿ ಬಂದಿತ್ತು. ಮಾಹಿತಿಯ ಮೇರೆಗೆ ಕಾರ್ಯನಿರ್ವಹಿಸಿದ ಸಿಐಎಸ್‌ಎಫ್‌ನ ಸಿಐಡಬ್ಲ್ಯೂ ತಂಡ, ಪ್ರಯಾಣಿಕನನ್ನು ಬಂಧಿಸಿದೆ. ಆತನ ಲಗೇಜ್‌ನಲ್ಲಿದ್ದ ಸುಮಾರು 512 ಗ್ರಾಂ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.
ನಂತರ ಸಿಐಎಸ್‌ಎಫ್ ಬೆಂಗಳೂರಿನ ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ (ಎನ್‌ಸಿಬಿ) ಮತ್ತು ಸ್ಥಳೀಯ ಪೊಲೀಸರಿಗೆ ಘಟನೆಯ ಬಗ್ಗೆ ಮಾಹಿತಿ ನೀಡಲಾಯಿತು. ಆರೊಪಿಯನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಬಜ್ಪೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಯಿತು.