ಉಡುಪಿ ಆರ್ ಟಿಓ ಅಧಿಕಾರಿ ಮನೆಗೆ ಲೋಕಾಯುಕ್ತ ದಾಳಿ

ಉಡುಪಿ: ಜಿಲ್ಲಾ ರಸ್ತೆ ಸಾರಿಗೆ ಕಚೇರಿಯ (ಆರ್ ಟಿಓ) ಅಧಿಕಾರಿ ಲಕ್ಷ್ಮೀನಾರಾಯಣ ಪಿ. ನಾಯಕ್ ಅವರ ಮನೆಗೆ ಲೋಕಾಯುಕ್ತ ಅಧಿಕಾರಿಗಳು ಇಂದು(ಅ.14) ಬೆಳಗ್ಗೆ ದಾಳಿ ನಡೆಸಿದ್ದಾರೆ.

ಲಕ್ಷ್ಮೀನಾರಾಯಣ ಪಿ. ನಾಯಕ್ ಅವರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾದವರಾಗಿದ್ದು, ಪ್ರಸ್ತುತ ಉಡುಪಿಯಲ್ಲಿ ಆರ್ ಟಿಓ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಸಾರ್ವಜನಿಕರಿಂದ ಬಂದ ದೂರಿನ ಹಿನ್ನೆಲೆಯಲ್ಲಿ ಉಡುಪಿಯ ಕಿನ್ನಿಮುಲ್ಕಿ ಪ್ರದೇಶದಲ್ಲಿರುವ ಫ್ಲ್ಯಾಟ್ ನಲ್ಲಿ ಲೋಕಾಯುಕ್ತ ಅಧಿಕಾರಿಗಳು ಅವರ ಮನೆ ಮತ್ತು ಸಂಬಂಧಿಕರ ನಿವಾಸಗಳಲ್ಲಿ ಶೋಧ ಕಾರ್ಯ ನಡೆಸಿದ್ದಾರೆ.

ಅಲ್ಲದೆ, ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮತ್ತು ಉಡುಪಿ ತಾಲೂಕಿನ ಪಡುಅಲೆವೂರು ಗ್ರಾಮದಲ್ಲಿರುವ ಅವರ ಸಂಬಂಧಿಕರ ಮನೆಗಳಲ್ಲೂ ಲೋಕಾಯುಕ್ತ ತಂಡ ಪರಿಶೀಲನೆ ನಡೆಸಿದೆ.

ಲಕ್ಷ್ಮೀನಾರಾಯಣ ನಾಯಕ್ ಅವರ ಆದಾಯ ಮತ್ತು ಆಸ್ತಿ ನಡುವಿನ ಅಸಮತೋಲನದ ಕುರಿತು ಬಂದ ದೂರು ಹಿನ್ನೆಲೆಯಲ್ಲಿ ಈ ಶೋಧ ಕಾರ್ಯ ನಡೆದಿದ್ದು, ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸಿ ಅಗತ್ಯ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

error: Content is protected !!