ಇಂದಿನಿಂದ ಅ.24ರ ತನಕ ಮಂಗಳೂರಿನಲ್ಲಿ ಖಾದಿ ಉತ್ಸವ

ಮಂಗಳೂರು: ರಾಜ್ಯ ಮಟ್ಟದ ‘ಖಾದಿ ಉತ್ಸವ – 2025’ ಅಕ್ಟೋಬರ್‌ 15ರಿಂದ ಅಕ್ಟೋಬರ್‌ 24ರವರೆಗೆ ಮಂಗಳೂರಿನ ಲಾಲ್ಬಾಗ್‌ನ ದಿ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಸಭಾಂಗಣದಲ್ಲಿ ನಡೆಯಲಿದೆ. ರಾಜ್ಯ ಸರ್ಕಾರ, ಜಿಲ್ಲಾ ಪಂಚಾಯತ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಸಂಯುಕ್ತ ಆಶ್ರಯದಲ್ಲಿ ಈ ಉತ್ಸವವನ್ನು ಆಯೋಜಿಸಲಾಗಿದೆ.

ವಿವಿಧ ಖಾದಿ ಹಾಗೂ ಗ್ರಾಮೋದ್ಯೋಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಇಂದು ಚಾಲನೆ ದೊರಕಿದ್ದು, ಪ್ರತಿದಿನ ಬೆಳಿಗ್ಗೆ 10ರಿಂದ ರಾತ್ರಿ 9ರವರೆಗೆ ಸಾರ್ವಜನಿಕರಿಗೆ ತೆರೆಯಲಾಗುತ್ತದೆ. ಸ್ಥಳೀಯ ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಬಂದಿರುವ ಖಾದಿ, ಹಸ್ತಕಲಾ, ಹಸ್ತಕೃತಿ, ಗ್ರಾಮೀಣ ಉತ್ಪನ್ನಗಳು ಮತ್ತು ಪರಿಸರ ಸ್ನೇಹಿ ವಸ್ತುಗಳು ಪ್ರದರ್ಶನದ ಆಕರ್ಷಣೆಯಾಗಿ ಇರಲಿವೆ.

ಖಾದಿ ಉತ್ಸವದ ಉದ್ದೇಶ, ಗ್ರಾಮೀಣ ಕೈಗಾರಿಕೆಗಳಿಗೆ ಪ್ರೋತ್ಸಾಹ ನೀಡುವುದು, ಸ್ವದೇಶೀ ಉತ್ಪನ್ನಗಳ ಬಳಕೆಯನ್ನು ಉತ್ತೇಜಿಸುವುದು ಮತ್ತು ಗಾಂಧೀಯ ಮೌಲ್ಯಗಳನ್ನು ಹೊಸ ಪೀಳಿಗೆಗೆ ಪರಿಚಯಿಸುವುದಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.

error: Content is protected !!