ಕಲ್ಲಿನಿಂದ ಜಜ್ಜಿ ಇಬ್ಬರ ಕೊಲೆ ಪ್ರಕರಣ: ಪರಾರಿಯಾಗಲೆತ್ನಿಸಿದ ಆರೋಪಿ ಕಾಲಿಗೆ ಗುಂಡೇಟು

ವಿಜಯಪುರ: ಜಿಲ್ಲೆಯ ಕನ್ನೂರು ಗ್ರಾಮದಲ್ಲಿ ಕಲ್ಲಿನಿಂದ ಜಜ್ಜಿ ಇಬ್ಬರು ಯುವಕರನ್ನು ಹತ್ಯೆ ಮಾಡಿದ್ದ ಪ್ರಕರಣ ಸಂಬಂಧ ಪ್ರಮುಖ ಆರೋಪಿ ಪರಾರಿಯಾಗಲು ಯತ್ನಿಸಿದ ವೇಳೆ ಆತನ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.

ಅಕ್ಷಯ್ ಜುಲಜುಲೆ ಬಂಧಿತ ಆರೋಪಿ.

ವಿಜಯಪುರ ಜಿಲ್ಲೆಯ ಕನ್ನೂರು ಗ್ರಾಮದಲ್ಲಿ ಭಾನುವಾರ ರಾತ್ರಿ ಸಾಗರ್ ಬೆಳುಂಡಗಿ (25) ಹಾಗೂ ಇಸಾಕ್ ಖುರೇಷಿ (24) ಎಂಬ ಇಬ್ಬರು ಯುವಕರ ಹತ್ಯೆ ನಡೆದಿತ್ತು.

ಈ ಕುರಿತು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕಲ್ಲಿನಿಂದ ಜಜ್ಜಿ ಇಬ್ಬರು ಯುವಕರ ಬರ್ಬರ ಹತ್ಯೆ

ತನಿಖೆಗಿಳಿದ ಪೊಲೀಸರು 5 ಮಂದಿ ಆರೋಪಿಗಳನ್ನು ಬಂಧಿಸಲು ಕನ್ನೂರು ಗ್ರಾಮದ ಹೊರವಲಯಕ್ಕೆ ತೆರಳಿದ್ದರು. ಈ ಸಂದರ್ಭ ಪ್ರಕರಣದ ಪ್ರಮುಖ ಆರೋಪಿ ಪರಾರಿಯಾಗಲು ಯತ್ನಿಸಿದ್ದಾನೆ. ಆಗ ಆತನ ಕಾಲಿಗೆ ಪೊಲೀಸರು ಗುಂಡು ಹಾರಿಸಿ, ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ವೇಳೆ ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, ಆರೋಪಿ ಹಾಗೂ ಸಿಬ್ಬಂದಿಯನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.

2023ರಲ್ಲಿ ಈರಣ್ಣಗೌಡ ಎಂಬಾತನ ಮೇಲೆ ಈಗ ಮೃತ ಸಾಗರ್ ಹಾಗೂ ಇಸಾಕ್ ಟೈಲ್ಸ್ ನಿಂದ ಹಲ್ಲೆ ನಡೆಸಿದ್ದರು. ಈರಣ್ಣಗೌಡ 8 ತಿಂಗಳುಗಳ ಕಾಲ ಚಿಕಿತ್ಸೆ ಪಡೆದು ನಂತರ ಮೃತಪಟ್ಟಿದ್ದ. ಇದೇ ದ್ವೇಷದಿಂದಲೇ ಅಕ್ಷಯ್ ಹಾಗೂ ಈರಣ್ಣಗೌಡ ಮಕ್ಕಳು ಸೇರಿ ಸಾಗರ್, ಇಸಾಕ್‌ನ್ನು ಹತ್ಯೆ ಮಾಡಿದ್ದಾರೆ ಎಂದು ತನಿಖೆ ವೇಳೆ ಗೊತ್ತಾಗಿದೆ ಎಂದು ಪೊಲೀಸರು ಮಾಹಿತಿ‌ ನೀಡಿದ್ದಾರೆ.

 

error: Content is protected !!