ಬೆಳ್ತಂಗಡಿ: ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬೆಳ್ತಂಗಡಿಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಇಂದು (ಆ.15) ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ.
ಕಣಿಯೂರು ಗ್ರಾಮದ ಪಿಲಿಗೂಡು ನಿವಾಸಿ ಯಶೋಧರ ಶೆಟ್ಟಿ ಅವರ ಪುತ್ರಿ, ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಾನ್ವಿ ಶೆಟ್ಟಿ ಕಳೆದ ಕೆಲ ಸಮಯಗಳಿಂದ ಅನಾರೋಗ್ಯದಿಂದ ಬಳಲುತಿದ್ದರು.
ಆದರೆ ಚಿಕಿತ್ಸೆ ಫಲಾಕಾರಿಯಾಗದೇ ಇಂದು ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.