ಹಿರಿಯ ಯಕ್ಷಗಾನ ಭಾಗವತ ʻಗಾನ ಕೋಗಿಲೆʼ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ

ಮಂಗಳೂರು: ಹಿರಿಯ ಯಕ್ಷಗಾನ ಭಾಗವತ ʻಗಾನ ಕೋಗಿಲೆʼ ಎಂದೇ ಬಿರುದಾಂಕಿತ ದಿನೇಶ್ ಅಮ್ಮಣ್ಣಾಯ(65) ಬೆಳ್ತಂಗಡಿಯ ಅರಸಿನಮಕ್ಕಿಯ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ.

ತೆಂಕುತಿಟ್ಟು ಯಕ್ಷಗಾನ ಪರಂಪರೆಯ ಹಿರಿಯ ಭಾಗವತರಾಗಿ ನಾಲ್ಕು ದಶಕಕ್ಕೂ ಹೆಚ್ಚು ಕಾಲ ಕಲಾ ಸೇವೆ ಸಲ್ಲಿಸಿದ್ದ ಅಮ್ಮಣ್ಣಾಯ ‘ರಸರಾಗ ಚಕ್ರವರ್ತಿ’ ಎಂಬ ಬಿರುದನ್ನೂ ಹೊಂದಿದ್ದರು. ದಾಮೋದರ ಮಂಡೆಚ್ಚರ ಗರಡಿಯಲ್ಲಿ ಆರಂಭದಲ್ಲಿ ಪುತ್ತೂರು ಮೇಳದಲ್ಲಿ ಚಂಡೆ ಮತ್ತು ಮದ್ದಳೆ ವಾದಕರಾಗಿ ಯಕ್ಷಗಾನ ಲೋಕಕ್ಕೆ ಕಾಲಿಟ್ಟ ಇವರು ನಂತರ ಭಾಗವತಿಕೆಯತ್ತ ಆಸಕ್ತಿ ಬೆಳೆಸಿ ಪ್ರಖ್ಯಾತ ಭಾಗವತರಾಗಿ ಹೊರಹೊಮ್ಮಿದರು.

ಸಿದ್ಧ ಡೇರೆ ಮೇಳವಾಗಿದ್ದ ಕರ್ನಾಟಕ ಮೇಳದಲ್ಲಿ ದಿಗ್ಗಜ ಕಲಾವಿದರನ್ನು ರಂಗದಲ್ಲಿ ಕುಣಿಸಿದ ಕೀರ್ತಿ ಅಮ್ಮಣ್ಣಾಯರಿಗೆ ಸಲ್ಲುತ್ತದೆ. ತುಳು ಪ್ರಸಂಗಗಳಿಗೆ ತನ್ನ ಕಂಠ ಮಾಧುರ್ಯದಿಂದ ಅಪಾರ ಅಭಿಮಾನಿಗಳನ್ನು ಸಂಪಾದಿಸಿಕೊಂಡಿದ್ದರು. ಎಡನೀರು ಮಠದ ಪರಮಶಿಷ್ಯರಾದ ಅಮ್ಮಣ್ಣಾಯರು ತಮ್ಮ ಜೀವನ ಅತೀ ಹೆಚ್ಚು ಯಕ್ಷಗಾನ ಭಾಗವತಿಕೆಯನ್ನು ಎಡನೀರು ಮಠದ ಮೇಳ ಹಾಗೂ ಎಡನೀರು ಕ್ಷೇತ್ರದಲ್ಲೇ ಮಾಡಿರುವುದು ವಿಶೇಷ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಇಂದು ತಮ್ಮ ಮನೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ದಿನೇಶ್ ಅಮ್ಮಣ್ಣಾಯರ ನಿಧನದಿಂದ ಯಕ್ಷಗಾನ ಲೋಕಕ್ಕೆ ತುಂಬಲಾರದ ನಷ್ಟ ಉಂಟಾಗಿದೆ.

✅Business Offer: TUZHAR ಮೂಲಕ ನಿಮ್ಮ ಸ್ವಂತ ಉದ್ಯಮದ ಕನಸನ್ನು ನನಸಾಗಿಸಿ. ಕಡಿಮೆ ಹೂಡಿಕೆ, ಕಚ್ಛಾವಸ್ತು ಪೂರೈಕೆ, ಮಾರುಕಟ್ಟೆ ಮಾರ್ಗದರ್ಶನ ಹಾಗೂ ಮಾರಾಟ ಬೆಂಬಲದೊಂದಿಗೆ “ಅಲ್ ನಜೀಮ್ ಅಸ್ ಸಖಿಬ್” ಸುಗಂಧ ದ್ರವ್ಯ ವ್ಯಾಪಾರಿಗಳೊಂದಿಗೆ ಸುಗಂಧ ದ್ರವ್ಯ ವ್ಯವಹಾರ ಪ್ರಾರಂಭಿಸಿ ಸ್ವಾವಲಂಬಿಗಳಾಗಿ 📲 +918088947906

error: Content is protected !!