ಸುರತ್ಕಲ್: ಮಂಗಳೂರು ಮಹಾನಗರ ಪಾಲಿಕೆಯ ಸಾಮಾನ್ಯ ನಿಧಿಯಿಂದ ಸುರತ್ಕಲ್ ಪೂರ್ವ 2ನೇ ವಾರ್ಡಿನ ವೆಂಕಟರಮಣ ಕಾಲನಿ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ₹8 ಲಕ್ಷ ಹಾಗೂ ತಡಂಬೈಲ್ ವೆಂಕಟರಮಣ ಕಾಲನಿಯಲ್ಲಿ ಮಳೆ ನೀರಿನ ಚರಂಡಿ ಕಾಮಗಾರಿಗೆ ₹5 ಲಕ್ಷ ಅನುದಾನ ಬಿಡುಗಡೆಗೊಂಡಿದೆ. ಈ ಕಾಮಗಾರಿಗಳಿಗೆ ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕರಾದ ಡಾ. ಭರತ್ ಶೆಟ್ಟಿ ವೈ ಅವರು ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಪಾಲಿಕೆ ವಾರ್ಡ್ ನಂ.2ರಲ್ಲಿ ಕಳೆದ ಕೆಲವು ವರ್ಷಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಗಳಲ್ಲಿ ಮಹತ್ತರ ಪ್ರಗತಿ ಕಂಡುಬಂದಿದೆ. ನಿಕಟಪೂರ್ವ ಸದಸ್ಯೆ ಶ್ವೇತಾ ಪೂಜಾರಿ ಅವರ ಅವಧಿಯಲ್ಲಿ ರಸ್ತೆ ಕಾಂಕ್ರೀಟೀಕರಣ, ತಡೆಗೋಡೆ ನಿರ್ಮಾಣ ಹಾಗೂ ಮುಂಚೂರಿನ ನೆರೆಗೆ ಶಾಶ್ವತ ಪರಿಹಾರ ಸೇರಿದಂತೆ ಅನೇಕ ಉತ್ತಮ ಕೆಲಸಗಳು ನಡೆದಿವೆ” ಎಂದು ಹೇಳಿದರು.
ಶ್ವೇತಾ ಪೂಜಾರಿ ಅವರು ಅನುದಾನ ಒದಗಿಸಿಕೊಟ್ಟ ಶಾಸಕರಿಗೆ ಧನ್ಯವಾದ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ನಿಕಟಪೂರ್ವ ಸದಸ್ಯೆ ಸರಿತಾ ಶಶಿಧರ, ಸುರತ್ಕಲ್ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಅಶೋಕ್ ಶೆಟ್ಟಿ ತಡಂಬೈಲ್, ಮಹಾ ಶಕ್ತಿಕೇಂದ್ರ ಅಧ್ಯಕ್ಷ ದಿನಕರ್ ಇಡ್ಯಾ, ಬಿಜೆಪಿ ಪ್ರಮುಖರು ಪುಷ್ಪರಾಜ್ ಮುಕ್ಕ, ರಾಘವೇಂದ್ರ ಶೆಣೈ, ಸುರೇಂದ್ರ, ಸುಧಾಕರ್, ಸಂತೋಷ್ ಕುಮಾರ್, ಸಜಿತ್ ಮತ್ತಿತರರು ಉಪಸ್ಥಿತರಿದ್ದರು.