ಬೆಂಗಳೂರು: ಆರ್‌ಎಸ್‌ಎಸ್ ಸೇರಿದಂತೆ ಖಾಸಗಿ ಸಂಘಟನೆಗಳು ಸರ್ಕಾರದ ಸ್ಥಳಗಳಲ್ಲಿ ಯಾವುದೇ ಚಟುವಟಿಕೆಗಳನ್ನು ನಡೆಸದಂತೆ ನಿರ್ಬಂಧಿಸಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಮೊನ್ನೆ ಮೊನ್ನೆ ಅಷ್ಟೇ ಸಚಿವ ಪ್ರಿಯಾಂಕ್ ಖರ್ಗೆ ಅವರು, ಸರ್ಕಾರಿ ಜಾಗದಲ್ಲಿ ಆರ್‌ಎಸ್‌ಎಸ್ ಸೇರಿ ಯಾವುದೇ ಖಾಸಗಿ ಸಂಘಟನೆಗಳ ಚಟುವಟಿಕೆ ನಡೆಸಬಾರದು ಎಂದು ಸಿಎಂಗೆ ಪತ್ರ ಬರೆದಿದ್ದರು. ಇದಾದ ಮೇಲೆ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ವಾಗ್ವಾದಗಳು ನಡೆದಿದ್ದವು. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಪೂರ್ವಾನುಮತಿ ಇಲ್ಲದೇ ಆರ್‌ಎಸ್‌ಎಸ್ ಬೈಠಕ್ ನಡೆಸುವಂತಿಲ್ಲ ಎಂದು ತಮಿಳುನಾಡಿನ ಮಾದರಿಯಲ್ಲಿ ರಾಜ್ಯ ಸರ್ಕಾರ ನಿರ್ಬಂಧವನ್ನು ವಿಧಿಸಿದೆ. ಈ ಸಂಬಂಧ ಸಭೆಯಲ್ಲಿ ಖುದ್ದು ವಿಷಯವನ್ನು ಸಿಎಂ ಸಿದ್ದರಾಮಯ್ಯ ಅವರು ಪ್ರಸ್ತಾಪಿಸಿದ್ದಾರೆ. ಇತ್ತೀಚೆಗೆ ಸಚಿವ ಪ್ರಿಯಾಂಕ್ ಖರ್ಗೆ ಎತ್ತಿದ್ದ ವಿಚಾರ ಕುರಿತು ಈ ಪ್ರಸ್ತಾಪ ಮಾಡಲಾಗಿದೆ.