ಹೊಸನಗರ: ಲಾರಿ ಬಸ್ಸಿನ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ತಾಲೂಕಿನ ನಿಟ್ಟೂರು ಗುರುಟೆ ಬಳಿ ಇಂದು(ಅ.17) ಬೆಳಿಗ್ಗೆ ನಡೆದಿದೆ.
ಸಾಗರದಿಂದ ನಿಟ್ಟೂರು ಮಾರ್ಗವಾಗಿ ಕುಂದಾಪುರ ಕಡೆ ಹೋಗುತ್ತಿದ್ದ ಖಾಸಗಿ ಬಸ್ಸು ಮತ್ತು ಎದುರುಗಡೆಯಿಂದ ಬರುತ್ತಿದ್ದ ಲಾರಿ ನಡುವೆ ಅಪಘಾತ ನಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ಸಿನಲ್ಲಿ ಇಬ್ಬರು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ. ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ.
ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.