ಮಂಗಳೂರು: ಹನಿ ಟ್ರ್ಯಾಪ್‌ನ ಬಲಿಯಾಗಿ ಯುವಕನೊಬ್ಬ ತನ್ನ ಜೀವ ಬಲಿ ನೀಡಿದ ಘಟನೆಗೆ ನೆಟಿಜಿನ್ಸ್ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಿಟ್ಟೆ ಗ್ರಾಮದ ಪರಪ್ಪಾಡಿ ನಿವಾಸಿ ಅಭಿಷೇಕ್ ಆಚಾರ್ಯ (23) ಬೆಳ್ಮಣ್‌ನ ಖಾಸಗಿ ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ ಬರೆದ ಏಳು ಪುಟಗಳ ಡೆತ್ ನೋಟ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಇದರ ಬೆನ್ನಲ್ಲೇ ಆರೋಪಿಗಳು ಅಭಿಷೇಕ್‌ಗೆ ಇನ್ಸ್ಟಾಗ್ರಾಂನಲ್ಲಿ ಬೆದರಿಕೆ ಹಾಕಿರುವ ಇನ್ಸ್ಟಾಗ್ರಾಂನ ಇನ್‌ಬಾಕ್ಸ್‌ನ ಸ್ಕ್ರೀನ್‌ಶಾಟ್ ವೈರಲ್ ಆಗಿದ್ದು, ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಸೋಷಿಯಲ್ ಮೀಡಿಯಾದಲ್ಲಿ ನೆಟಿಜಿನ್ಸ್ ಟ್ರೆಂಡ್ ಸೃಷ್ಟಿಸಿದ್ದಾರೆ.
ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬಯೋಮೆಡಿಕಲ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ಅಭಿಷೇಕ್, ತನ್ನ ಸಾವಿಗೆ ಲೇಡಿಗೋಷನ್ ಆಸ್ಪತ್ರೆಯ ಸ್ಟಾಫ್ ನರ್ಸ್ ನಿರೀಕ್ಷಾ, ರಾಕೇಶ್ ರಾಹುಲ್ ಮತ್ತು ತಸ್ಲಿಂ ಕಾರಣ ಎಂದು ಡೆತ್‌ನೋಟಲ್ಲಿ ಆರೋಪಿಸಿದ್ದಾನೆ.
ಈ ಕುರಿತಂತೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ನಾಲ್ವರ ಮೊಬೈಲ್‌ಗಳನ್ನು ವಶಪಡಿಸಿಕೊಂಡು ಡಿಜಿಟಲ್ ಸಾಕ್ಷ್ಯ ಪರಿಶೀಲನೆ ನಡೆಸುತ್ತಿದ್ದಾರೆ. ಆದರೆ ಆರೋಪಿಗಳ ಬಂಧನ ಇನ್ನೂ ಯಾಕೆ ಆಗಿಲ್ಲ ಎಂದು ನೆಟಿಜಿನ್ಸ್ ಸೋಷಿಯಲ್ ಮೀಡಿಯಾದಲ್ಲಿ ಪ್ರಶ್ನಿಸುತ್ತಿದ್ದಾರೆ.
ಡೆತ್ ನೋಟ್‌ನಲ್ಲೇ ಹೆಸರು, ಘಟನೆ, ಬೆದರಿಕೆ, ಹಣದ ವ್ಯವಹಾರಗಳ ವಿವರಗಳಿದ್ದರೂ ತನಿಖೆ ನಿಧಾನಗತಿಯಲ್ಲಿದೆ. ಪ್ರಕರಣದ ಶೀಘ್ರ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿ ಅಭಿಷೇಕ್‌ಗೆ ನ್ಯಾಯ ಒದಗಿಸುವಂತೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಆಗ್ರಹಿಸಿದ್ದಾರೆ.