ಮೂಡುಬಿದಿರೆ: ಕನ್ನಡ ಸಾರಸ್ವತ ಲೋಕದಲ್ಲಿ ಅತ್ಯಧಿಕ ರಾಯಲ್ಟಿ ಗಳಿಸಿದ ಖ್ಯಾತ ಸಾಹಿತಿ ಡಾ. ಎಸ್.ಎಲ್. ಭೈರಪ್ಪನವರು ಸಾಹಿತ್ಯದಿಂದ ಬಂದ ಹಣವನ್ನು ಸಂಪೂರ್ಣವಾಗಿ ಸಮಾಜಕ್ಕೇ ಹಿಂದಿರುಗಿಸಿದ ಕೀರ್ತಿ ಅವರದ್ದು ಎಂದು ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ. ಅಜಕ್ಕಳ ಗಿರೀಶ್ ಭಟ್ ಹೇಳಿದರು.
ಡಾ. ಭೈರಪ್ಪನವರ ವ್ಯಕ್ತಿತ್ವ, ಬರಹಗಳಲ್ಲಿನ ಜೀವನ ಮೌಲ್ಯಗಳ ಕುರಿತು ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕನ್ನಡ ಸಂಘ ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮೂಡುಬಿದಿರೆ ಘಟಕದ ಸಹಯೋಗದಲ್ಲಿ ನಡೆದ ‘ನುಡಿನಮನ’ ಕಾರ್ಯಕ್ರಮದಲ್ಲಿ ಡಾ. ಅಜಕ್ಕಳ ಗಿರೀಶ್ ಭಟ್ ಅವರು ಮಾತನಾಡಿದರು.

ಕನ್ನಡ ಸಾಹಿತ್ಯ ಪರಿಷತ್ತು ಮೂಡುಬಿದಿರೆ ತಾಲೂಕು ಘಟಕದ ಅಧ್ಯಕ್ಷ ವೇಣುಗೋಪಾಲ್ ಶೆಟ್ಟಿ ಕೆ., ಕಾಲೇಜಿನ ಪ್ರಾಂಶುಪಾಲ ಡಾ.ಪೀಟರ್ ಫೆರ್ನಾಂಡಿಸ್, ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ಜೀವನ್ ರಾಮ್ ಸುಳ್ಯ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಶ್ರೀಲಕ್ಷ್ಮಿ ನಿರೂಪಿಸಿದರು. ಪ್ರನುಷ ವಂದಿಸಿದರು.