ಮಂಗಳೂರು: ಪುತ್ತೂರಿನ ಕುರಿಯ ಗ್ರಾಮದ ಬಶೀರ್ ಎಂಬ ಆಟೋ ಚಾಲಕನನ್ನು ಟ್ರಾಫಿಕ್ ಸಿಬ್ಬಂದಿ ಬೈಕ್ ನಲ್ಲಿ ಹಿಂಬಾಲಿಸಿಕೊಂಡು ಬಂದು ಹಲ್ಲೆ ಮಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಸಾರ್ವಜನಿಕರು ಪೋಲೀಸರ ಕಾರ್ಯವೈಖರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು.
ಜಿಲ್ಲಾ ಎಸ್ಪಿಯವರು ತಪ್ಪು ಮಾಡಿರುವ ಇಬ್ಬರು ಸಿಬ್ಬಂದಿಗಳಾದ ಚಿದಾನಂದ ರೈ ಮತ್ತು ಶೈಲ ಎಂ.ಕೆ. ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಬಶೀರ್ ಸಮವಸ್ತ್ರ ಧರಿಸಿದೇ ಆಟೋ ಚಲಾಯಿಸಿಕೊಂಡು ಬರುತ್ತಿರುವಾಗ, ಕರ್ತವ್ಯದಲ್ಲಿದ್ದ ಸಿಬ್ಬಂದಿ ಕೈ ಸನ್ನೆ ಮೂಲಕ ನಿಲ್ಲಿಸಲು ಸೂಚಿಸಿದ್ದರೂ ತನ್ನ ವಾಹನವನ್ನು ನಿಲ್ಲಿಸದೇ ವೇಗವಾಗಿ ಚಲಾಯಿಸಿಕೊಂಡು ಬಂದು ಮೋಟಾರ್ ವಾಹನ ಕಾಯ್ದೆ ಉಲ್ಲಂಘನೆ ಮಾಡಿರುತ್ತಾನೆ, ಈ ವೇಳೆ ಆತನನ್ನು ಹಿಂಬಾಲಿಸಿ ವಾಹನವನ್ನು ತಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿ ಕೈಯಿಂದ ಹಲ್ಲೆ ಮಾಡಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ವೈರಲ್ ಆಗಿರುತ್ತದೆ. ಇದನ್ನು ಪರಿಶೀಲಿಸಿ ಸಿಬ್ಬಂದಿಯನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ.