ಬೈಂದೂರು: ಶಿರೂರು ಕೆಳಪೇಟೆಯಲ್ಲಿ ಬೊಲೆರೋ ಪಿಕಪ್ ರಿಕ್ಷಾಕ್ಕೆ ಢಿಕ್ಕಿ ಹೊಡೆದು ಪರಿಣಾಮ ರಿಕ್ಷಾ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು(ಅ.18) ಮಧ್ಯಾಹ್ನ ನಡೆದಿದೆ.
ಶಿರೂರು ಗ್ರಾಮದ ಹಡವಿನಕೋಣೆ ನ್ಯೂ ಕಾಲೋನಿ ನಿವಾಸಿ ಕರಾ ಇಲಿಯಾಸ್(49) ಮೃತಪಟ್ಟ ಚಾಲಕ.

ಮಲ್ಪೆಯಿಂದ ಭಟ್ಕಳ ಕಡೆಗೆ ಸಾಗುತ್ತಿದ್ದ ಮೀನಿನ ವಾಹನ ಶಿರೂರು ಮಾರ್ಕೆಟ್ ಕಡೆಗೆ ಸಾಗುತ್ತಿದ್ದ ಆಟೋ ರಿಕ್ಷಾಕ್ಕೆ ಹಿಂದಿನಿಂದ ಢಿಕ್ಕಿ ಹೊಡೆದಿದ್ದು, ಢಿಕ್ಕಿಯಾದ ರಭಸಕ್ಕೆ ರಿಕ್ಷಾ ನಜ್ಜುನುಜ್ಜಾಗಿದ್ದು, ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.