ಕರಾವಳಿಯಲ್ಲಿ ಭಾರೀ ಮಳೆ: ಮನೆಗಳಿಗೆ ಹಾನಿ, ಜನಜೀವನ ಅಸ್ತವ್ಯಸ್ತ

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಭಾನುವಾರ(ಅ.19) ಸಂಜೆ ಸಂಭವಿಸಿದ ಗುಡುಗು-ಮಿಂಚು ಸಹಿತ ಭಾರೀ ಮಳೆಯಿಂದ ಹಲವಾರು ಮನೆಗಳಿಗೆ ಹಾನಿಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕರಾವಳಿ ತೀರದುದ್ದಕ್ಕೂ ಮುಂಗಾರು ಪೂರ್ವ ಮಳೆ ತೀವ್ರಗೊಂಡಿದೆ.

ಸುರತ್ಕಲ್, ಬಂಟ್ವಾಳ, ಕಲ್ಲಡ್ಕ, ಬಿ.ಸಿ. ರೋಡ್, ಬೆಳ್ತಂಗಡಿ, ಮಡಂತ್ಯಾರು, ಉಜಿರೆ, ಧರ್ಮಸ್ಥಳ, ಕನ್ಯಾನ, ವಿಟ್ಲ, ಕಡಬ, ಸುಳ್ಯ, ಸುಬ್ರಹ್ಮಣ್ಯ, ಪಂಜ, ಬೆಳ್ಳಾರೆ, ಪುತ್ತೂರು, ಉಪ್ಪಿನಂಗಡಿ, ಮೂಡುಬಿದಿರೆ ಮತ್ತು ಬಜ್ಪೆ ಸೇರಿದಂತೆ ದಕ್ಷಿಣ ಕನ್ನಡದ ಹಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಅಪ್ಪಳಿಸಿದೆ. ಮಂಗಳೂರು ನಗರದಲ್ಲಿ ಭಾನುವಾರ ಸಂಜೆ 6 ಗಂಟೆ ಸುಮಾರಿಗೆ ಸುರಿದ ಮಳೆ ಮತ್ತು ಬಿರುಗಾಳಿಯಿಂದ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿ ಸಂಚಾರಕ್ಕೆ ಅಡಚಣೆಯುಂಟಾಯಿತು.

ಕುಲಶೇಖರದಲ್ಲಿ ಶನಿವಾರ 10 ಮನೆಗಳಿಗೆ ಸಿಡಿಲು ಬಡಿದು ಹಾನಿ ಸಂಭವಿಸಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ವಿದ್ಯುತ್ ಮೀಟರ್‌ಗಳು ಸುಟ್ಟು ಹೋಗಿವೆ. ಶಾಸಕ ಐವನ್ ಡಿಸೋಜಾ ಅವರು ಹಾನಿಗೊಳಗಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೂಡುಬಿದಿರೆಯ ಇರುವೈಲ್‌ನ ದೇವರಗುಡ್ಡೆಯ ರೇವತಿ ಪೂಜಾರ್ತಿ ಅವರ ಮನೆಗೆ ಶನಿವಾರ ಸಂಜೆ ಸಿಡಿಲು ಬಡಿದು ಹಾನಿಯಾಗಿದೆ. ಅದೃಷ್ಟವಶಾತ್, ಘಟನೆ ಸಂಭವಿಸಿದಾಗ ಮನೆಯಲ್ಲಿ ಯಾರೂ ಇರಲಿಲ್ಲ. ಸಿಡಿಲು ಬಡಿದ ಪರಿಣಾಮ ವಿದ್ಯುತ್ ಉಪಕರಣಗಳು ಮತ್ತು ಮನೆಯ ವಸ್ತುಗಳು ಹಾನಿಗೊಂಡಿವೆ.

ಬಂಟ್ವಾಳ ತಾಲೂಕಿನ ಕುಡ್ಮೇಲು ಗ್ರಾಮದ ಪುದುವಿನಲ್ಲಿ ಹರೀಶ್ ಅವರ ಮನೆಯ ಸಿಟ್‌ಔಟ್‌ಗೆ ಸಿಡಿಲು ಬಡಿದು, ಮಾಡಿನ ಹೆಂಚುಗಳು ಮತ್ತು ಕಾಂಕ್ರೀಟ್ ಭಾಗಗಳಿಗೆ ಹಾನಿಯಾಗಿರುವ ಘಟನೆ ಶನಿವಾರ(ಅ.18) ರಾತ್ರಿ ನಡೆದಿರುವ ಕುರಿತು ಕಂದಾಯ ಇಲಾಖೆಗೆ ಮಾಹಿತಿ ನೀಡಲಾಗಿದೆ.

ಬೆಳ್ತಂಗಡಿ ತಾಲೂಕುಗಳಲ್ಲಿ ಭಾನುವಾರ ಸಂಜೆ ಗುಡುಗು ಸಹಿತ ಸಾಧಾರಣ ಮಳೆಯಾಗಿದೆ. ಯಾವುದೇ ದೊಡ್ಡ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಅಕ್ಟೋಬರ್ 18ರ ಸಂಜೆ ಪ್ರಾರಂಭವಾದ ಮಳೆ ತಡರಾತ್ರಿಯವರೆಗೆ ಮುಂದುವರಿದಿತ್ತು.

ಉಡುಪಿ ಜಿಲ್ಲೆಯಲ್ಲಿ ಅಕ್ಟೋಬರ್ 21 ರವರೆಗೆ ಮಳೆ ಮುಂದುವರಿಯುವ ಮುನ್ಸೂಚನೆ ನೀಡಲಾಗಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಭಾನುವಾರ ಸಂಜೆ ಬೈಂದೂರು, ಕುಂದಾಪುರ, ಕೋಟ, ಸಾಲಿಗ್ರಾಮ, ಬ್ರಹ್ಮಾವರ, ಉಡುಪಿ, ಮಣಿಪಾಲ, ಹೆಬ್ರಿ, ಶಿರಿಯಾರ, ಕಾಪು ಮತ್ತು ಪಡುಬಿದ್ರಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ನಿರಂತರ ಮಳೆ ಸುರಿದಿದೆ. ನಿರಂತರ ಮಳೆಯಿಂದಾಗಿ ದೀಪಾವಳಿ ಹಬ್ಬದ ಪಟಾಕಿ ಮಾರಾಟದ ಮೇಲೆ ಪರಿಣಾಮ ಬೀರಿದೆ ಎನ್ನಲಾಗಿದೆ.

ಕಾಪುವಿನ ಪಡುಗ್ರಾಮದಲ್ಲಿ ಶನಿವಾರ ಸಂಜೆ ಶಾಂತಾರಾಮ ಕೋಟ್ಯಾನ್ ಅವರ ಮನೆಗೆ ಸಿಡಿಲು ಬಡಿದು ಕಟ್ಟಡದ ವೈರಿಂಗ್, ಟಿವಿ, ರೆಫ್ರಿಜರೇಟರ್ ಮತ್ತು ಇತರ ವಿದ್ಯುತ್ ಉಪಕರಣಗಳು ಹಾಳಾಗಿವೆ. ಸುಮಾರು 3 ಲಕ್ಷ ರೂಪಾಯಿಗಳಿಗಿಂತ ಹೆಚ್ಚು ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಕಂದಾಯ ಅಧಿಕಾರಿಗಳು ಮತ್ತು ನಗರಸಭೆಯ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

✅Business Offer✅: TUZHAR ಸುಗಂಧ ದ್ರವ್ಯದೊಂದಿಗೆ ನಿಮ್ಮ ಸ್ವಂತ ಉದ್ಯಮದ ಕನಸನ್ನು ನನಸಾಗಿಸಿ. 💰ಕಡಿಮೆ ಹೂಡಿಕೆ, 📦ಕಚ್ಛಾವಸ್ತು ಪೂರೈಕೆ, 📈 ಮಾರ್ಗದರ್ಶನ ಹಾಗೂ ಮಾರಾಟ ಬೆಂಬಲದೊಂದಿಗೆ “ಅಲ್ ನಜೀಮ್ ಅಸ್ ಸಖಿಬ್” ಜೊತೆ ನಿಮ್ಮ ಸ್ವಂತ ವ್ಯವಹಾರ ಪ್ರಾರಂಭಿಸಿ. 📲 +918088947906 🌐 www.tuzharperfumes.com

ಪುತ್ತೂರು ತಾಲೂಕಿನ ಕೋಡಿಂಬಾಡಿ ಬಳಿಯ ಬೆಳ್ಳಿಪ್ಪಾಡಿಯಲ್ಲಿ ಭಾನುವಾರ(ಅ.19) ಸಂಜೆ ಅನಂತ ರಾಮ ಶೆಟ್ಟಿ ಅವರ ಮನೆಗೆ ಸಿಡಿಲು ಬಡಿದು ಗೋಡೆಗಳಲ್ಲಿ ಬಿರುಕು ಉಂಟಾಗಿದೆ. ಟಿವಿ ಮತ್ತು ಫ್ಯಾನ್‌ಗಳು ಸೇರಿದಂತೆ ಗೃಹಬಳಕೆಯ ವಿದ್ಯುತ್ ಉಪಕರಣಗಳು ಹಾಳಾಗಿವೆ. ವಿದ್ಯುತ್ ವೈರಿಂಗ್‌ಗಳು ಸಹ ಸುಟ್ಟುಹೋಗಿವೆ, ಆದರೆ ಮನೆಯ ಸದಸ್ಯರು ಸುರಕ್ಷಿತವಾಗಿ ಪಾರಾಗಿದ್ದಾರೆ.

✨ ಬನ್ನಿ, SilverRoute Journeys ಜೊತೆ ಕನಸಿನ ಪ್ರಯಾಣ ಆರಂಭಿಸಿ! ✨ ✈️ ವಿಮಾನ | 🚆 ರೈಲು & ಬಸ್ | 🏨 ಹೋಟೆಲ್ | 🌴 ರಜಾ ಪ್ಯಾಕೇಜ್‌ಗಳು 📞 +918197945822

ಹವಾಮಾನ ಮುನ್ಸೂಚನೆ

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪ್ರಕಾರ, ಕರಾವಳಿಯಲ್ಲಿ ಮುಂದಿನ ಒಂದು ವಾರದವರೆಗೆ ಮಳೆ ಮುಂದುವರಿಯುವ ನಿರೀಕ್ಷೆಯಿದೆ. ಅಕ್ಟೋಬರ್ 20 ರಿಂದ 25 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದ್ದು, ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.

ಮಳೆಯಿಂದಾಗಿ ನಗರದಾದ್ಯಂತ ದೀಪಾವಳಿ ಹಬ್ಬದ ವ್ಯಾಪಾರದ ಮೇಲೂ ಪರಿಣಾಮ ಬೀರಿದೆ. ನಿರಂತರ ಮಳೆಯಿಂದಾಗಿ ದೀಪಾವಳಿ ಹಬ್ಬದ ಪಟಾಕಿ ಮಾರಾಟದ ಮೇಲೆ ಪರಿಣಾಮ ಬೀರಿದೆ ಎನ್ನಲಾಗಿದೆ.

error: Content is protected !!