ಬೆಂಗಳೂರು: ಆರ್ ಎಸ್ಎಸ್ ಸೇರಿದಂತೆ ಖಾಸಗಿ ಸಂಘ, ಸಂಸ್ಥೆಗಳು ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮ ಮಾಡಲು ಪೂರ್ವಾನುಮತಿ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಆರ್ ಎಸ್ಎಸ್ ಕಾರ್ಯ ಚಟುವಟಿಕೆಗಳನ್ನು ರದ್ದುಗೊಳಿಸುವತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂಗೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಆರ್ ಎಸ್ಎಸ್ ಹೆಸರು ಉಲ್ಲೇಖಿಸಿದೇ ಅದನ್ನೇ ಗುರಿಯಾಸಿಕೊಂಡು ಸರ್ಕಾರ ಈ ಕ್ರಮ ಕೈಗೊಂಡಿದೆ.
ಇನ್ನು ಮುಸ್ಲಿಮರು ಸಹ ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಪಡೆಯುತ್ತಾರಾ ಎಂದು ಹಿಂದೂ ಹಾಗೂ ಬಿಜೆಪಿ ನಾಯಕರು ಪ್ರಶ್ನಿಸಿದ್ದು, ಈ ಸಂಬಂಧ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿ, ಕಾನೂನು ಎಲ್ಲರಿಗೂ ಒಂದೆ. ಮುಸ್ಲಿಮರು ಸಹ ಸರ್ಕಾರಿ ಮೈದಾನದಲ್ಲಿ ನಮಾಜ್ ಮಾಡಬೇಕಿದ್ದರೆ ಅನುಮತಿ ಪಡೆಯಬೇಕೆಂದು ಖಡಕ್ ಆಗಿ ಹೇಳಿದ್ದಾರೆ.