ಕಾಸರಗೋಡು: ಸೀತಾಂಗೋಳಿ ಬಳಿಯ ಪುತ್ತಿಗೆಯಲ್ಲಿ ಸೋಮವಾರ(ಅ.20) ರಾತ್ರಿ ವಿದ್ಯುತ್ ಅವಘಡದಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.
ಪುತ್ತಿಗೆಯ ಆಚಾರಿಮೂಲೆ ನಿವಾಸಿ ರಾಜೇಶ್ ಆಚಾರ್ಯ (37) ಮೃತ ವ್ಯಕ್ತಿ.
ದೀಪಾವಳಿ ಆಚರಣೆಗಾಗಿ ರಾಜೇಶ್ ತಮ್ಮ ಮನೆಯ ಅಂಗಳದಲ್ಲಿ ಅಲಂಕಾರಿಕ ದೀಪಗಳನ್ನು ಅಳವಡಿಸುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಲ್ಪಟ್ಟು, ಕುಟುಂಬ ಸದಸ್ಯರು ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಿದರೂ ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ.

ರಾಜೇಶ್ ವೃತ್ತಿಯಲ್ಲಿ ಬಡಗಿಯಾಗಿ ಕೆಲಸ ಮಾಡುತ್ತಿದ್ದರು. ಅವರ ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಸಂಬಂಧಿಕರಿಗೆ ಹಸ್ತಾಂತರಿಸಲಾಗುವುದು.
ಈ ಸಂಬಂಧ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.