ಕೇರಳಕ್ಕೆ ಭಾರೀ ಮಳೆಯ ಎಚ್ಚರಿಕೆ – ದಕ್ಷಿಣ ಕನ್ನಡದಲ್ಲೂ ಪರಿಣಾಮ ಸಾಧ್ಯತೆ

ಮಂಗಳೂರು: ಕೇರಳದಲ್ಲಿ ಮುಂದಿನ ಕೆಲವು ದಿನಗಳಲ್ಲಿ ಭಾರೀ ಮಳೆಯ ಸಾಧ್ಯತೆಯ ಹಿನ್ನೆಲೆಯಲ್ಲಿ ಹವಾಮಾನ ರೆಡ್‌ ಅಲರ್ಟ್‌ ಹಾಗೂ ಆರೆಂಜ್‌ ಅಲರ್ಟ್‌ ನೀಡಿದೆ. ಈ ಹವಾಮಾನ ಬದಲಾವಣೆಯ ಪರಿಣಾಮ ಕೇರಳ-ಕರ್ನಾಟಕ ಗಡಿ ಜಿಲ್ಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಬೀಳುವ ಸಾಧ್ಯತೆ ಇದ್ದು, ಗುಡುಗು ಸಹಿತ ಮಳೆಯಾಗುವ ಸಂಭವಿದೆ. ದಕ್ಷಿಣ ಕನ್ನಡದ ನಾನಾ ಭಾಗಗಳಲ್ಲಿ ಈಗಾಗಲೇ ಗುಡುಗು ಸಹಿತ ಮಳೆಯಾಗುತ್ತಿದ್ದು, ಅದು ಇನ್ನಷ್ಟು ತೀವ್ರವಾಗುವ ಸಾಧ್ಯತೆ ಇದೆ.

ಆಗ್ನೇಯ ಅರೇಬಿಯನ್ ಸಮುದ್ರದ ಮೇಲೆ ಕಡಿಮೆ ಒತ್ತಡದ ಪ್ರದೇಶ ರೂಪುಗೊಂಡಿದ್ದು, ಮುಂದಿನ 24 ಗಂಟೆಗಳಲ್ಲಿ ಅದು ತೀವ್ರಗೊಳ್ಳುವ ನಿರೀಕ್ಷೆ ಇದೆ. ಬಂಗಾಳಕೊಲ್ಲಿಯಲ್ಲಿಯೂ ಮತ್ತೊಂದು ಕಡಿಮೆ ಒತ್ತಡದ ಪ್ರದೇಶ ಸಕ್ರಿಯವಾಗುವ ಸಾಧ್ಯತೆ ಇದೆ. ಈ ಎರಡೂ ವ್ಯವಸ್ಥೆಗಳ ಪರಿಣಾಮವಾಗಿ ಅಕ್ಟೋಬರ್ 22ರಿಂದ 24ರವರೆಗೆ ಕೇರಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕಾಸರಗೋಡು, ವಯನಾಡ್, ಕಣ್ಣೂರು ಸೇರಿದಂತೆ ಗಡಿ ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಜಾರಿಯಾಗಿದೆ.

 

✅Business Offer: TUZHAR ಮೂಲಕ ನಿಮ್ಮ ಸ್ವಂತ ಉದ್ಯಮದ ಕನಸನ್ನು ನನಸಾಗಿಸಿ. ಕಡಿಮೆ ಹೂಡಿಕೆ, ಕಚ್ಛಾವಸ್ತು ಪೂರೈಕೆ, ಮಾರುಕಟ್ಟೆ ಮಾರ್ಗದರ್ಶನ ಹಾಗೂ ಮಾರಾಟ ಬೆಂಬಲದೊಂದಿಗೆ “ಅಲ್ ನಜೀಮ್ ಅಸ್ ಸಖಿಬ್” ಸುಗಂಧ ದ್ರವ್ಯ ವ್ಯಾಪಾರಿಗಳೊಂದಿಗೆ ಸುಗಂಧ ದ್ರವ್ಯ ವ್ಯವಹಾರ ಪ್ರಾರಂಭಿಸಿ ಸ್ವಾವಲಂಬಿಗಳಾಗಿ 📲 +918088947906

ಕೇರಳದ ಕಾಸರಗೋಡು, ದಕ್ಷಿಣ ಕನ್ನಡದ ಪುತ್ತೂರು, ಸುಳ್ಯ, ಉಪ್ಪಿನಂಗಡಿ, ಸುಬ್ರಹ್ಮಣ್ಯ ಹಾಗೂ ಮಂಗಳೂರು ಭಾಗಗಳಲ್ಲಿಯೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವಿಕೆ, ಮರ ಉರುಳಿಕೆ, ಭೂಕುಸಿತ ಮತ್ತು ಸಂಚಾರ ವ್ಯತ್ಯಯದ ಅಪಾಯವಿದೆ. ಕರಾವಳಿ ಪ್ರದೇಶಗಳಲ್ಲಿ ಸಮುದ್ರ ಅಲೆಗಳು ಹೆಚ್ಚುವ ಸಾಧ್ಯತೆ ಇರುವುದರಿಂದ ಮೀನುಗಾರರಿಗೆ ಸಮುದ್ರಯಾನ ತಪ್ಪಿಸುವಂತೆ ಸೂಚಿಸಲಾಗಿದೆ. ಜನರು ಅಗತ್ಯವಿದ್ದರೆ ಮಾತ್ರ ಪ್ರಯಾಣ ಮಾಡಬೇಕು. ನದಿ ದಂಡೆ, ದುರ್ಬಲ ಮನೆಗಳು ಹಾಗೂ ವಿದ್ಯುತ್ ಕಂಬಗಳಿಂದ ದೂರ ಇರಬೇಕು ಎಂದು ಆಡಳಿತ ಎಚ್ಚರಿಸಿದೆ.

ಐಎಂಡಿ ಬಿಡುಗಡೆ ಮಾಡುತ್ತಿರುವ ನವೀಕೃತ ಹವಾಮಾನ ಎಚ್ಚರಿಕೆಗಳನ್ನು ಗಮನದಲ್ಲಿಡಲು ಸಾರ್ವಜನಿಕರನ್ನು ಕೋರಲಾಗಿದೆ. ಅತಿವೃಷ್ಟಿ ಸಂದರ್ಭಗಳಲ್ಲಿ ತುರ್ತು ಸೇವೆಗಳ ಸಹಾಯ ಪಡೆಯುವಂತೆ ಕಾಸರಗೋಡು ಜಿಲ್ಲಾಡಳಿತ ಮನವಿ ಮಾಡಿದೆ.

error: Content is protected !!