ಲಿವಿಂಗ್​ ಟುಗೆದರ್​ನಲ್ಲಿದ್ದ ಜೋಡಿ ನೇಣಿಗೆ ಶರಣು !

ಬೆಂಗಳೂರು : ಆನೇಕಲ್ ತಾಲೂಕಿನ ಕಲ್ಲುಬಾಳು ಗ್ರಾಮದಲ್ಲಿ ಲಿವಿಂಗ್​ ಟುಗೆದರ್​ನಲ್ಲಿದ್ದ ಜೋಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಒಡಿಶಾ ಮೂಲದ ಸೀಮಾ ನಾಯಕ್(25) ಮತ್ತು ರಾಕೇಶ್(23) ಮೃತ ಜೋಡಿ.

ಎರಡು ದಿನಗಳಿಂದ ಮನೆ ಬಾಗಿಲು ತೆರೆಯದ ಹಿನ್ನೆಲೆ ಸ್ಥಳೀಯರು ಅನುಮಾನಗೊಂಡು ಕಿಟಕಿ ಗಾಜು ಒಡೆದು ನೋಡಿದಾಗ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ಗೊತ್ತಾಗಿದೆ. ಕೂಡಲೇ ಜಿಗಣಿ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದು, ಸ್ಥಳಕ್ಕೆ ಎಎಸ್​​ಪಿ ವೆಂಕಟೇಶ್ ಪ್ರಸನ್ನ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜೋಡಿ ಮಧ್ಯೆ ಪದೇ ಪದೇ ಕಲಹ ಉಂಟಾಗುತ್ತಿತ್ತು. ಕುಡಿದು ಬಂದು ರಾಕೇಶ್ ಜಗಳ ಮಾಡುತ್ತಿದ್ದ. ಭಾನುವಾರವೂ ಸೀಮಾ ನಾಯಕ್ ಜೊತೆ ಜಗಳ ಮಾಡಿದ್ದ. ಬೆಳಗ್ಗೆ ಎದ್ದಾಗ ರಾಕೇಶ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವುದು ಸೀಮಾ ಗಮನಕ್ಕೆ ಬಂದಿದೆ. ಆತನಿಗೆ ಇನ್ನೂ ಜೀವ ಇರಬಹುದು ಎಂಬ ನಂಬಿಕೆಯಿಂದ ರಾಕೇಶ್​ ನನ್ನು ಉಳಿಸಿಕೊಳ್ಳಲು ಒಂದಿಷ್ಟು ಪ್ರಯತ್ನಗಳನ್ನು ಸೀಮಾ ಮಾಡಿದ್ದಾರೆ. ಆದರೆ ಆತ ಮೃತಪಟ್ಟಿರೋದು ದೃಢವಾಗುತ್ತಿದ್ದಂತೆ ಸೀಮಾ ಕೂಡ ನೇಣಿಗೆ ಶರಾಣಗಿರೋದಾಗಿ ಪೊಲೀಸರು ತಿಳಿಸಿದ್ದಾರೆ.

✅Business Offer✅: TUZHAR ಸುಗಂಧ ದ್ರವ್ಯದೊಂದಿಗೆ ನಿಮ್ಮ ಸ್ವಂತ ಉದ್ಯಮದ ಕನಸನ್ನು ನನಸಾಗಿಸಿ. 💰ಕಡಿಮೆ ಹೂಡಿಕೆ, 📦ಕಚ್ಛಾವಸ್ತು ಪೂರೈಕೆ, 📈 ಮಾರ್ಗದರ್ಶನ ಹಾಗೂ ಮಾರಾಟ ಬೆಂಬಲದೊಂದಿಗೆ “ಅಲ್ ನಜೀಮ್ ಅಸ್ ಸಖಿಬ್” ಜೊತೆ ನಿಮ್ಮ ಸ್ವಂತ ವ್ಯವಹಾರ ಪ್ರಾರಂಭಿಸಿ. 📲 +918088947906 🌐 www.tuzharperfumes.com

ಘಟನೆ ಸಂಬಂಧ ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!