ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಇಂದು(ಅ.27) ಸೌಜನ್ಯಾ ಪರ ಹೋರಾಟಗಾರರೆಂದು ಗುರುತಿಸಿಕೊಂಡ ನಾಲ್ವರ ವಿಚಾರಣೆ ನಡೆಸಲಿದೆ.

ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ ಮತ್ತು ವಿಠಲ ಗೌಡ್ ಅವರನ್ನು ಎಸ್‌ಐಟಿ ಮುಖ್ಯ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅವರು ಇಂದು ಬೆಳಗ್ಗೆ 10.30ಕ್ಕೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ವಿಚಾರಣೆಯ ನಂತರ ಅವರನ್ನು ವಶಕ್ಕೆ ತೆಗೆದುಕೊಳ್ಳುವ ಸಾಧ್ಯತೆಯಿದೆ.

ಈ ನಡುವೆ, ಬೆಳ್ತಂಗಡಿಯಲ್ಲಿ ಪ್ರತಿಭಟನೆ ನಡೆಸಲು ಅನುಮತಿ ಕೋರಿದ್ದನ್ನು ಪೊಲೀಸರು ನಿರಾಕರಿಸಿದ್ದಾರೆ. ಪ್ರಕರಣ ಹೈಕೋರ್ಟ್‌ನಲ್ಲಿ ವಿಚಾರಣೆಯಲ್ಲಿರುವ ಕಾರಣ ಪ್ರತಿಭಟನೆಗೆ ಅನುಮತಿ ನೀಡಲಾಗುವುದಿಲ್ಲ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಎಸ್‌ಐಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರು ಬೆಳ್ತಂಗಡಿಯಲ್ಲೇ ಭಾನುವಾರದಿಂದ ತಂಗಿದ್ದು, ಇಂದಿನ ವಿಚಾರಣೆ ಮುಗಿದ ನಂತರ ಬೆಂಗಳೂರು ಮರಳಲಿದ್ದಾರೆ.