ಬೀದಿನಾಯಿಗಳ ಹಾವಳಿ: ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಖಡಕ್‌ ವಾರ್ನಿಂಗ್

ನವದೆಹಲಿ: ಬೀದಿ ನಾಯಿಗಳ ನಿಯಂತ್ರಣ ಕುರಿತು ಸಲ್ಲಿಸಬೇಕಾದ ಅನುಸರಣಾ ಅಫಿಡವಿಟ್‌ಗಳನ್ನು (Compliance Affidavits) ಸಲ್ಲಿಸದ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಗಂಭೀರ ಎಚ್ಚರಿಕೆ ನೀಡಿದೆ. ಪಶ್ಚಿಮ ಬಂಗಾಳ ಮತ್ತು ತೆಲಂಗಾಣವನ್ನು ಹೊರತುಪಡಿಸಿ ಉಳಿದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳು ನವೆಂಬರ್ 3ರಂದು ನ್ಯಾಯಾಲಯದ ಮುಂದೆ ಹಾಜರಾಗಿ ವಿಳಂಬದ ಕಾರಣವನ್ನು ವಿವರಿಸಲು ಸೂಚಿಸಲಾಗಿದೆ.

ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಈ ಆದೇಶ ನೀಡಿದ್ದು, ಆಗಸ್ಟ್ 22ರಂದು ನೀಡಿದ ಹಿಂದಿನ ನಿರ್ದೇಶನವನ್ನು ಉಲ್ಲೇಖಿಸಿದೆ. ಆ ದಿನಾಂಕದ ಆದೇಶದಂತೆ ದೆಹಲಿ, ಪಶ್ಚಿಮ ಬಂಗಾಳ ಮತ್ತು ತೆಲಂಗಾಣ ಮಾತ್ರ ಅನುಸರಣಾ ವರದಿ ಸಲ್ಲಿಸಿದ್ದವು.

SC JUSTICE VIKARAM NATH

ಸುಪ್ರೀಂಕೋರ್ಟ್‌ನ ಜಸ್ಟೀಸ್ ವಿಕ್ರಮನಾಥ್‌ಪೀಠವು ಇತರ ರಾಜ್ಯಗಳ ನಿರ್ಲಕ್ಷ್ಯವನ್ನು ಗಂಭೀರವಾಗಿ ಪರಿಗಣಿಸಿದ್ದು, ಬೀದಿ ನಾಯಿಗಳ ಸಮಸ್ಯೆ ರಾಷ್ಟ್ರವ್ಯಾಪಿ ವಿಚಾರವಾಗಿರುವುದರಿಂದ ಎಲ್ಲ ರಾಜ್ಯಗಳು ಕಾನೂನುಬದ್ಧ ಬದ್ಧತೆ ಪಾಲಿಸಬೇಕೆಂದು ಸ್ಪಷ್ಟಪಡಿಸಿದೆ.

ಸುಪ್ರೀಂ ಕೋರ್ಟ್ ಆಗಸ್ಟ್ 22ರ ಆದೇಶದಲ್ಲಿ, ದೆಹಲಿ-ಎನ್‌ಸಿಆರ್ ಪ್ರದೇಶದ ಮಿತಿಯನ್ನು ಮೀರಿ ಈ ಪ್ರಕರಣದ ವ್ಯಾಪ್ತಿಯನ್ನು ವಿಸ್ತರಿಸಿ, ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಪಕ್ಷಗಳನ್ನಾಗಿ ಮಾಡುವಂತೆ ನಿರ್ದೇಶಿಸಿತ್ತು. ಅದೇ ವೇಳೆ, ಲಸಿಕೆ ಹಾಕಿದ ನಾಯಿಗಳನ್ನು ಗೂಡುಗಳಲ್ಲಿ ಇಡುವ ಹಿಂದಿನ ನಿಷೇಧವನ್ನು ಹಿಂಪಡೆಯಲಾಗಿತ್ತು. ಲಸಿಕೀಕರಣಗೊಂಡ ನಾಯಿಗಳನ್ನು ಬಿಡುಗಡೆ ಮಾಡಲು ಅನುಮತಿ ನೀಡಿತ್ತು.

✅Business Offer: TUZHAR ಮೂಲಕ ನಿಮ್ಮ ಸ್ವಂತ ಉದ್ಯಮದ ಕನಸನ್ನು ನನಸಾಗಿಸಿ. ಕಡಿಮೆ ಹೂಡಿಕೆ, ಕಚ್ಛಾವಸ್ತು ಪೂರೈಕೆ, ಮಾರುಕಟ್ಟೆ ಮಾರ್ಗದರ್ಶನ ಹಾಗೂ ಮಾರಾಟ ಬೆಂಬಲದೊಂದಿಗೆ “ಅಲ್ ನಜೀಮ್ ಅಸ್ ಸಖಿಬ್” ಸುಗಂಧ ದ್ರವ್ಯ ವ್ಯಾಪಾರಿಗಳೊಂದಿಗೆ ಸುಗಂಧ ದ್ರವ್ಯ ವ್ಯವಹಾರ ಪ್ರಾರಂಭಿಸಿ ಸ್ವಾವಲಂಬಿಗಳಾಗಿ 📲 +918088947906

error: Content is protected !!