ಮಂಗಳೂರು: ಮಧ್ಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಾಕಿಯಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ವಿದ್ಯಾನಿಧಿ ಎಜುಕೇಶನ್ ಟ್ರಸ್ಟ್ ವತಿಯಿಂದ ಕರ್ನಾಟಕ ಸರಕಾರದ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಅವರ ಮಂಗಳೂರು ನಗರ ಪಾಲಿಕೆಯ ಕಚೇರಿಯಲ್ಲಿ ಮನವಿ ಸಲ್ಲಿಸಲಾಯಿತು.

ಮನವಿಗೆ ಸ್ಪಂದಿಸಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಈ ಕಾಮಗಾರಿಗಳ ಆದ್ಯತೆ ಮೇಲೆ ಅನುದಾನ ಇಡುವುದಾಗಿ ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ವಿದ್ಯಾನಿಧಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ಮಂಗಳೂರು ಉದ್ಯಮಿ ರಂಜನ್ ಚೌಟ ಮಧ್ಯ ಉಪಸ್ಥಿತರಿದ್ದರು