ಹೈಕಮಾಂಡ್ ತೀರ್ಮಾನಿಸಿದರೆ ಐದು ವರ್ಷವೂ ನಾನೇ ಸಿಎಂ: ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಕೂಟ ಉದ್ಘಾಟಿಸಿದ ಸಿದ್ದರಾಮಯ್ಯ

ಮಂಗಳೂರು: ಮಂಗಳೂರಿನ ಉರ್ವಾದ ಇಂಡೋರ್ ಸ್ಟೇಡಿಯಂನಲ್ಲಿ ಅಕ್ಟೋಬರ್ ೨೭ರಿಂದ ನವೆಂಬರ್ ೨ರವರೆಗೆ ರಾಜ್ಯದಲ್ಲೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಕ್ರೀಡಾಕೂಟವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.


ಇದೇ ಸುದ್ದಿಗಾರರ ಜೊತೆ ಮಾತಾಡಿದ ಸಿದ್ದರಾಮಯ್ಯ ‘ಹೈಕಮಾಂಡ್ ತೀರ್ಮಾನ ಮಾಡಿದರೆ ನಾನೇ ಐದು ವರ್ಷ ಸಿಎಂ ಆಗಿ ಮುಂದುವರಿಯುತ್ತೇನೆ” ಎಂದು ಸೋಮವಾರ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.



ಸಿಎಂ ಸ್ಪರ್ಧೆ ಪ್ರಜಾಪ್ರಭುತ್ವದಲ್ಲಿ ಹಕ್ಕು. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡಿದರೆ ನಾನೇ ಐದು ವರ್ಷ ಸಿಎಂ ಆಗಿ ಮುಂದುವರಿಯುತ್ತೇನೆ’ ಎಂದು ಹೇಳಿದರು.
ಆರ್ ಎಸ್ ಎಸ್ ನಾಯಕ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಎಫ್‌ಐಆರ್ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ”ದ್ವೇಷದ ಭಾಷಣ ಮಾಡುವವರು ಯಾರೇ ಆದರೂ ಎಫ್ ಐಆರ್ ದಾಖಲು ಮಾಡುತ್ತೇವೆ”ಎಂದರು.
“ಚೀಫ್ ಮಿನಿಸ್ಟರ್ಸ್ ಮಂಗಳೂರು ಇಂಡಿಯಾ ಅಂತಾರಾಷ್ಟ್ರೀಯ ಚಾಲೆಂಜ್” ಎಂಬ ಹೆಸರಿನಲ್ಲಿ ನಡೆಯುವ ಈ ಕ್ರೀಡಾಕೂಟಕ್ಕೆ ಸುಮಾರು ೨.೫ ಕೋಟಿ ವೆಚ್ಚವಾಗಲಿದ್ದು, ಅದರಲ್ಲಿ ಮುಖ್ಯಮಂತ್ರಿ ?೧ ಕೋಟಿ ರೂ. ನೀಡಿದ್ದಾರೆ.

ಸುಮಾರು ೪೦೦ ಕ್ರೀಡಾಪಟುಗಳು ಭಾಗವಹಿಸಲಿದ್ದು, ದೇಶ-ವಿದೇಶಗಳ ಅನೇಕ ಕ್ರೀಡಾಪಟುಗಳು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ. ಜಿಲ್ಲಾಡಳಿತದಿಂದ ಸಂಪೂರ್ಣ ಸಹಕಾರ ನೀಡಲಾಗುವುದು. ಈ ಕ್ರೀಡಾಕೂಟದ ಮೂಲಕ ನಮ್ಮ ರಾಜ್ಯದ ಕ್ರೀಡಾಪಟುಗಳಿಗೆ ಉತ್ತೇಜನ ಸಿಗಲಿದೆ ಎಂದು ಗುಂಡೂರಾವ್ ಹೇಳಿದರು.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಜಿಲ್ಲಾ ಬ್ಯಾಡ್ಮಿಂಟನ್ ಕ್ರೀಡಾಕೂಟದ ಅಧ್ಯಕ್ಷ ಸಂತೋಷ್ ಶೆಟ್ಟಿ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಐವನ್ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು.

error: Content is protected !!