“ಬಿಜೆಪಿ ಯೋಜನೆಗಳು ಕೇವಲ ಭಾಷಣಕ್ಕೆ ಸೀಮಿತ, ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿ” – ರೇವಣ್ಣ ಟೀಕೆ

ಬಂಟ್ವಾಳ: ಬಂಟ್ವಾಳದಲ್ಲಿ ನಡೆದ ಗೃಹಲಕ್ಷ್ಮೀ ಫಲಾನುಭವಿಗಳ ಸ್ವಸಹಾಯ ಸಂಘಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಪಂಚ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ. ರೇವಣ್ಣ ಅವರು, “ಯೋಜನೆಯನ್ನು ಮೂದಲಿಸಿದವರೇ ಇಂದು ಅದನ್ನು ಕಾಪಿ ಮಾಡುತ್ತಿದ್ದಾರೆ” ಎಂದು ಟೀಕಿಸಿದರು. “ಕರ್ನಾಟಕದ ಗ್ಯಾರಂಟಿ ಯೋಜನೆ ಇಡೀ ದೇಶಕ್ಕೆ ಮಾದರಿ” ಎಂದು ಹೇಳಿದ್ದಾರೆ.

ರೇವಣ್ಣ ಅವರು ದ.ಕ. ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು ಗ್ಯಾರಂಟಿ ಯೋಜನೆಗಳ ಸವಲತ್ತು ಪಡೆವರಿದ್ದಾರೆ. ಆದರೆ ಸವಲತ್ತು ಪಡೆದವರೇ ಯೋಜನೆಯನ್ನು ಟೀಕಿಸುತ್ತಿದ್ದಾರೆ. ಬಿಜೆಪಿ ಯೋಜನೆಗಳು ʼಕೇವಲ ಭಾಷಣಕ್ಕೆ ಸೀಮಿತʼ ಆದರೆ ಸಿಎಂ ಸಿದ್ದರಾಮಯ್ಯ ಅವರ ಎಲ್ಲಾ ಚುನಾವಣಾ ಭರವಸೆಗಳು ಈಡೇರಿದೆ ಎಂದು ಪ್ರತಿಪಾದಿಸಿದರು.

✅Business Offer✅: TUZHAR ಸುಗಂಧ ದ್ರವ್ಯದೊಂದಿಗೆ ನಿಮ್ಮ ಸ್ವಂತ ಉದ್ಯಮದ ಕನಸನ್ನು ನನಸಾಗಿಸಿ. 💰ಕಡಿಮೆ ಹೂಡಿಕೆ, 📦ಕಚ್ಛಾವಸ್ತು ಪೂರೈಕೆ, 📈 ಮಾರ್ಗದರ್ಶನ ಹಾಗೂ ಮಾರಾಟ ಬೆಂಬಲದೊಂದಿಗೆ “ಅಲ್ ನಜೀಮ್ ಅಸ್ ಸಖಿಬ್” ಜೊತೆ ನಿಮ್ಮ ಸ್ವಂತ ವ್ಯವಹಾರ ಪ್ರಾರಂಭಿಸಿ. 📲 +918088947906 🌐 www.tuzharperfumes.com

ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, “ಕಾಂಗ್ರೆಸ್ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಹಿತ ಅನೇಕ ಯೋಜನೆಗಳನ್ನು ತಾಲೂಕಿನಲ್ಲಿ ಅತ್ಯಂತ ಹೆಚ್ಚು ಪಲಾನುಭವಿಗಳು ಪಡೆದಿದ್ದಾರೆ. ಹಸಿವು ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ಕಾಂಗ್ರೆಸ್ ಸರಕಾರದ ಅನೇಕ ಯೋಜನೆಗಳು ಟೀಕೆಯನ್ನು ಮೀರಿ ಜನಪ್ರಿಯವಾಗಿದೆ” ಎಂದು ತಿಳಿಸಿದರು.

ಪಂಚಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಬಂಟ್ವಾಳ ತಾಲೂಕು ಅಧ್ಯಕ್ಷೆ ಜಯಂತಿ ವಿ.ಪೂಜಾರಿ ಅವರು ಪ್ರಸ್ತಾವನೆಗೈದು, ತಾಲೂಕಿಗೆ ಐದು ಯೋಜನೆಗಳಿಗೆ ಇದುವರೆಗೆ 528 ಕೋ.ರೂ.ಅನುದಾನ ಬಿಡುಗಡೆಗೊಂಡಿದೆ ಎಂದು ಸಭೆಯ ವಿವರಿಸಿದರು. ಇದೇ ವೇಳೆ ಸ್ವಸಹಾಯ ಗುಂಪುಗಳ ಮೂಲಕ ಸಾಧನೆಗೈದ ಸಂಘಗಳನ್ನು ಗುರುತಿಸಿ ಅಭಿನಂದನೆ ಸಲ್ಲಿಸಲಾಯಿತು.

ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷೆ ಪುಪ್ಪಾ ಅಮರನಾಥ್, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ದ.ಕ. ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ,ಪುರಸಭಾಧ್ಯಕ್ಷ ವಾಸು ಪೂಜಾರಿ ಲೊರೆಟ್ಟೋ, ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್, ಕರ್ನಾಟಕ ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಜಿಲ್ಲಾ ಸಮಿತಿ ಉಪಾಧ್ಯಕ್ಷ ನಾರಾಯಣ ನಾಯ್ಕ್, ಕಡಬ ತಾಲೂಕು ಪಂಚ ಗ್ಯಾರಂಟಿ ಯೋಜನೆಯ ಸಮಿತಿ ಅಧ್ಯಕ್ಷ ಸುಧೀರ್ ಶೆಟ್ಟಿ, ಜಿಪಂ ಸಿಇಒ ನರ್ವಾಡೆ ವಿನಾಯಕ ಕಾರ್ಬಾರಿ, ಗೃಹಲಕ್ಷ್ಮೀ ಜಿಲ್ಲಾ ನೋಡಲ್ ಅಧಿಕಾರಿ ಉಸ್ಮಾನ್ ಅತಿಥಿಗಳಾಗಿ ಭಾಗವಹಿಸಿದ್ದರು. ತಾಲೂಕು ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ತಾ.ಪಂ.ಇಒ ಸಚಿನ್ ಕುಮಾರ್ ಸ್ವಾಗತಿಸಿದರು. ಪಿಡಿಒ ಸುನೀಲ್ ಕಾರ್ಯಕ್ರಮ ನಿರೂಪಿಸಿದರು.

error: Content is protected !!