ಬರೋಬ್ಬರಿ 91 ಕೆ.ಜಿ. ಗೋಮಾಂಸ ಜಪ್ತಿ: ಇಬ್ಬರು ಗೋಹಂತಕರು ಸೆರೆ

ಬೆಳ್ತಂಗಡಿ: ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟುವಿನ ರಬ್ಬರ್‌ ತೋಟದ ಶೆಡ್‌ನೊಳಗಡೆ ಇದ್ದ ಗೋಮಾಂಸ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ಬರೋಬ್ಬರಿ 91 ಕೆ.ಜಿ. ಮಾಂಸ ಜಪ್ತಿ ಮಾಡಿ ಇಬ್ಬರನ್ನು ಬಂಧಿಸಿದ್ದಾರೆ. ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟುವಿನ ಅಬ್ದುಲ್ ನಝೀರ್ (36) ಮತ್ತು ಮಿತ್ತಬಾಗಿಲು ಗ್ರಾಮದ ಝಕಾರಿಯಾ (36) ಬಂಧಿತ ಗೋ ಹಂತಕರು.

ಆರೋಪಿಗಳು ದನಗಳನ್ನು ಕಳವು ಮಾಡಿ, ಅಕ್ರಮವಾಗಿ ವಧಿಸಿ ಮಾಂಸವನ್ನು ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ, ಪೊಲೀಸರು ಅಕ್ಟೋಬರ್ 27 ರಂದು ಮಧ್ಯಾಹ್ನ 2:30 ರ ಸುಮಾರಿಗೆ ಸ್ಥಳಕ್ಕೆ ದಾಳಿ ನಡೆಸಿ, 91 ಕೆಜಿ ಗೋಮಾಂಸ, ಚಾಕು ಮತ್ತು ಇತರ ಸಂಬಂಧಿತ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ನಿರೀಕ್ಷಕ ಸುಬ್ಬಪುರ್ ಮಠ ಅವರ ಮಾರ್ಗದರ್ಶನದಲ್ಲಿ, ಬೆಳ್ತಂಗಡಿ ಪೊಲೀಸ್ ಠಾಣೆಯ ಪಿಎಸ್‌ಐ ಆನಂದ್ ಎಂ ಮತ್ತು ವೇಣೂರು ಪೊಲೀಸ್ ಠಾಣೆಯ ಪಿಎಸ್‌ಐ ಓಮನ ತಮ್ಮ ತಂಡದೊಂದಿಗೆ ಈ ದಾಳಿ ನಡೆಸಿದರು. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಗೋವಧೆ ಪ್ರತಿಬಂಧಕ ಮತ್ತು ಜಾನುವಾರು ಸಂರಕ್ಷಣಾ ಅಧಿನಿಯಮ 2020 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

✅Business Offer: TUZHAR ಮೂಲಕ ನಿಮ್ಮ ಸ್ವಂತ ಉದ್ಯಮದ ಕನಸನ್ನು ನನಸಾಗಿಸಿ. ಕಡಿಮೆ ಹೂಡಿಕೆ, ಕಚ್ಛಾವಸ್ತು ಪೂರೈಕೆ, ಮಾರುಕಟ್ಟೆ ಮಾರ್ಗದರ್ಶನ ಹಾಗೂ ಮಾರಾಟ ಬೆಂಬಲದೊಂದಿಗೆ “ಅಲ್ ನಜೀಮ್ ಅಸ್ ಸಖಿಬ್” ಸುಗಂಧ ದ್ರವ್ಯ ವ್ಯಾಪಾರಿಗಳೊಂದಿಗೆ ಸುಗಂಧ ದ್ರವ್ಯ ವ್ಯವಹಾರ ಪ್ರಾರಂಭಿಸಿ ಸ್ವಾವಲಂಬಿಗಳಾಗಿ 📲 +918088947906

error: Content is protected !!