ಬೆಳ್ಳಾರೆ: ಬಸ್ ನಿಲ್ದಾಣದಲ್ಲಿ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಓರ್ವನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ.

ಗಿರಿಧರ ರೈ ಬಂಧಿತ ಆರೋಪಿ.
ಭಾನುವಾರ(ಅ.26) ಮಧ್ಯಾಹ್ನ 2ರ ಸುಮಾರಿಗೆ ಮುರುಳ್ಯ ಗ್ರಾಮದ ನಿಂತಿಕಲ್ಲು ಜಂಕ್ಷನ್‌ನಲ್ಲಿದ್ದ ಬಾಲಕಿಗೆ ಗಿರಿಧರ ರೈ ಲೈಂಗಿಕ ದೌರ್ಜನ್ಯ ಎಸಗಿ ಪರಾರಿಯಾಗಿದ್ದ ಎನ್ನಲಾಗಿದೆ.

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.