ಡಿವೈಡರ್ ಗೆ‌ ಕಾರು ಡಿಕ್ಕಿ: ಓರ್ವ ಚಾಲಕ ಸಾವು, ನಾಲ್ವರಿಗೆ ಗಾಯ

ಬಂಟ್ವಾಳ: ರಾ.ಹೆ.75ರ ಮೆಲ್ಕಾರಿನಲ್ಲಿ ಕಾರೊಂದು ಡಿವೈಡರ್ ಗೆ ಡಿಕ್ಕಿಯಾಗಿ ಕಾರು ಚಾಲಕ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡ ಘಟನೆ ಮಂಗಳವಾರ(ಅ.28) ರಾತ್ರಿ ನಡೆದಿದೆ.

ಕಡಬ ತಾಲೂಕಿನ ಸವಣೂರು ನಿವಾಸಿ ಕಾರ್ತಿಕ್(23) ಮೃತ ವ್ಯಕ್ತಿ. ಕಾರಿನಲ್ಲಿದ್ದ ಅವರ ಸ್ನೇಹಿತರಾದ ಸವಣೂರು ನಿವಾಸಿಗಳಾದ ಹರ್ಷಿತ್, ದೀಕ್ಷಿತ್, ಜಗದೀಶ್ ಮತ್ತು ನಿತಿನ್ ಎಂಬವರು ಗಾಯಗೊಂಡಿದ್ದಾರೆ.

✅Business Offer✅: TUZHAR ಸುಗಂಧ ದ್ರವ್ಯದೊಂದಿಗೆ ನಿಮ್ಮ ಸ್ವಂತ ಉದ್ಯಮದ ಕನಸನ್ನು ನನಸಾಗಿಸಿ. 💰ಕಡಿಮೆ ಹೂಡಿಕೆ, 📦ಕಚ್ಛಾವಸ್ತು ಪೂರೈಕೆ, 📈 ಮಾರ್ಗದರ್ಶನ ಹಾಗೂ ಮಾರಾಟ ಬೆಂಬಲದೊಂದಿಗೆ “ಅಲ್ ನಜೀಮ್ ಅಸ್ ಸಖಿಬ್” ಜೊತೆ ನಿಮ್ಮ ಸ್ವಂತ ವ್ಯವಹಾರ ಪ್ರಾರಂಭಿಸಿ. 📲 +918088947906 🌐 www.tuzharperfumes.com

ಕಾರಿನಲ್ಲಿದ್ದ ಐವರು ಮಂಗಳೂರಿನಿಂದ ಸವಣೂರಿನ ಕಡೆಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಡಿವೈಡರ್ ಗೆ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಚಾಲಕ ಕಾರ್ತಿಕ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!