ಧರ್ಮಸ್ಥಳ ಬುರುಡೆ ಪ್ರಕರಣ: ಹೈಕೋರ್ಟ್ ಮೊರೆಹೋದ ಹೋರಾಟಗಾರರು

ಬೆಳ್ತಂಗಡಿ: ಧರ್ಮಸ್ಥಳ ವಿರುದ್ಧ ದೂರದಾರ ಚಿನ್ನಯ್ಯನ ಹೇಳಿಕೆ ಆಧಾರದ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸುವಂತೆ ಬುರುಡೆ ಗ್ಯಾಂಗ್ ಗಿರೀಶ್‌ ಮಟ್ಟಣ್ಣನವರ್‌ , ಮಹೇಶ್‌ ತಿಮರೋಡಿ, ಜಯಂತ್‌ ಹಾಗೂ ವಿಠಲ ಗೌಡ ಹೈಕೋರ್ಟ್‌ ಮೆಟ್ಟಿಲೇರಿ ಅರ್ಜಿ ಸಲ್ಲಿಸಿದ್ದಾರೆ.

ಪ್ರಕರಣ ಸಂಬಂಧ ತಮ್ಮ ವಿರುದ್ದ ದಾಖಲಾಗಿರುವ ಎಫ್ ಐಆರ್‌, ವಿಚಾರಣೆಗೆ ಹಾಜರಾಗಲು ಪೊಲೀಸರು ನೀಡಿರುವ ನೋಟಿಸ್‌ ಹಾಗೂ ಬೆಳ್ತಂಗಡಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ರದ್ದುಪಡಿಸುವಂತೆ ಕೋರಿ ಗಿರೀಶ್‌ ಮಟ್ಟಣ್ಣನವರ್‌, ಮಹೇಶ್‌ ಶೆಟ್ಟಿ ತಿಮರೋಡಿ, ಟಿ. ಜಯಂತ್‌ ಹಾಗೂ ವಿಠಲಗೌಡ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯು ನ್ಯಾಯಮೂರ್ತಿ ಮೊಹಮ್ಮದ್‌ ನವಾಜ್‌ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ರುವಾರ ವಿಚಾರಣೆಗೆ ನಿಗದಿಯಾಗಿದೆ.

ಪ್ರತಿಭಟನೆಗೆ ಕಾರಣವಾಗಿದ್ದ ಧರ್ಮಸ್ಥಳ ಗ್ರಾಮದ ಪ್ರಕರಣದಲ್ಲಿ ಬುರುಡೆ ತಂದು ಆರೋಪಗಳ ಸುರಿಮಳೆಗೈದಿದ್ದ ಚಿನ್ನಯ್ಯ ತಪ್ಪೊಪ್ಪಿಕೊಂಡಿದ್ದರಿಂದ ಇಡೀ ಬುರುಡೆ ಗ್ಯಾಂಗ್‌ ಸಂಕಷ್ಟಕ್ಕೆ ಸಿಲುಕಿದೆ ಎನ್ನಲಾಗಿದೆ.

ಧರ್ಮಸ್ಥಳದಲ್ಲಿ ದಾಖಲಾದ FIR ರದ್ದು ಎಂಬ ಸುದ್ದಿಗೆ ಸ್ಪಷ್ಟಿಕರಣ ನೀಡಿದ ಹೋರಾಟಗಾರರು!

ಧರ್ಮಸ್ಥಳದಲ್ಲಿ ದಾಖಲಾಗಿರುವ ಎಫ್‌ಐಆ‌ರ್ ರದ್ದಾಗಿದೆ ಎಂಬ ಸುಳ್ಳು ಸುದ್ದಿ ಹರಿದಾಡುತ್ತಿದ್ದು, ಈ ಬಗ್ಗೆ ಸೌಜನ್ಯ ಪರ ಹೋರಾಟಗಾರರು ಸ್ಪಷ್ಟಿಕರಣ ನೀಡಿದ್ದಾರೆ. ಈ ಮಾಹಿತಿ ಸತ್ಯಕ್ಕೆ ದೂರವಾಗಿದ್ದು, ಸಾರ್ವಜನಿಕರು ತಪ್ಪು ಮಾಹಿತಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ.

ಸೌಜನ್ಯ ಹೋರಾಟಗಾರರಾದ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಇತರ ಮೂವರು, ಎಸ್‌ಐಟಿ (ವಿಶೇಷ ತನಿಖಾ ದಳ) ನೀಡಿರುವ ನೋಟಿಸ್‌ ಕಾನೂನುಬದ್ಧವಾಗಿಲ್ಲ ಎಂದು ಪ್ರಶ್ನಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ವಿಚಾರಣೆಗೆ ಹಾಜರಾದಾಗ ತಮ್ಮನ್ನು ಬಂಧಿಸದಂತೆ ಮತ್ತು ತನಿಖೆಗೆ ಸಂಪೂರ್ಣ ಸಹಕಾರ ನೀಡಲು ಸಿದ್ಧವಿರುವುದಾಗಿ ಈ ಅರ್ಜಿಯಲ್ಲಿ ತಿಳಿಸಲಾಗಿದೆ. ಆದರೆ, ಈ ಅರ್ಜಿ ಎಫ್‌ಐಆ‌ರ್ ರದ್ದತಿಗಾಗಿ ಸಲ್ಲಿಸಿದ್ದಲ್ಲ ಎಂದು ಹೋರಾಟಗಾರರು ಸ್ಪಷ್ಟಪಡಿಸಿದ್ದು, ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ತಿಳಿಸಿದ್ದಾರೆ.

error: Content is protected !!