
ಸುರತ್ಕಲ್ : ರಂಗ ಚಾವಡಿ ಮಂಗಳೂರು ಸಾಹಿತ್ಯಿಕ ಸಾಂಸ್ಜೃತಿಕ ಸಂಘಟನೆ ಮತ್ತು ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ರಂಗು ರಂಗಿನ ರಂಗೋತ್ಸವ, ರಂಗಚಾವಡಿ ಬೆಳ್ಳಿಹಬ್ಬದ ಸಂಭ್ರಮ ನವಂಬರ್ 9 ಭಾನುವಾರ ಸಂಜೆ 4.30 ಕ್ಕೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ.

ಸಮಾರಂಭದಲ್ಲಿ 2025 ರ ಸಾಲಿನ ರಂಗಚಾವಡಿ ಪ್ರಶಸ್ತಿಗೆ ಆಯ್ಕೆಯಾಗಿರುವ ಕುಸೇಲ್ದರಸೆ ನವೀನ್ ಡಿ ಪಡೀಲ್ ಅವರನ್ನು ಗೌರವಿಸಲಾಗುವುದು.

ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ವಿ.ಕೆ ಸಮೂಹ ಸಂಸ್ಥೆಗಳ ಅಧ್ಯಕ್ಷ ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಕೆ ಅಜಿತ್ ಕುಮಾರ್ ರೈ ಮಾಲಾಡಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಚಲನ ಚಿತ್ರ ನಿರ್ಮಾಪಕ. ಡಾ ಸಂಜೀವ ದಂಡೆಕೇರಿ, ಉದ್ಯಮಿ ಅನಿಲ್ ಶೆಟ್ಟಿ ತೇವು ಸೂರಿಂಜೆ, ಶ್ರೀ ಡೆವಲಪರ್ಸ್ ಕಟೀಲ್ ನ ಆಡಳಿತ ನಿರ್ದೇಶಕ ಗಿರೀಶ್ ಎಂ ಶೆಟ್ಟಿ ಕಟೀಲು, ತುಳು ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷ ಕಿಶೋರ್ ಡಿ ಶೆಟ್ಟಿ, ಸಾಯಿ ಪ್ರೀಥ್ವಿ ಕಾರ್ಪೋರೇಶನ್ ಪ್ರೈವೆಟ್ ಲಿಮಿಟೆಡ್ ನ ಆಡಳಿತ ನಿರ್ದೇಶಕ ಭವಾನಿ ಶಂಕರ್ ಡಿ ಶೆಟ್ಟಿ, ಚಲನ ಚಿತ್ರ ನಿರ್ಮಾಪಕ ಚಂದ್ರಶೇಖರ ಮಾಡ ಕುದ್ರಾಡಿಗುತ್ತು, ಬಜಪೆ ಬಂಟರ ಸಂಘದ ಅಧ್ಯಕ್ಷ ವೇಣುಗೋಪಾಲ್ ಶೆಟ್ಟಿ, ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್, ಕಲಾವಿದರ ಮತ್ತು ತಂತ್ರಜ್ಞರ ಒಕ್ಕೂಟದ ಅಧ್ಯಕ್ಷ ಲಂಚುಲಾಲ್ ಕೆ ಎಸ್, ಚಿತ್ರನಟ ಶೋಧನ್ ಶೆಟ್ಟಿ, ಸುರತ್ಕಲ್ ವ್ಯವಸಾಯ ಸೇವಾ ಸಹಕಾರಿ ನಿಯಮಿತದ ಅಧ್ಯಕ್ಷ ಅಶೋಕ್ ಶೆಟ್ಟಿ ತಡಂಬೈಲ್, ಯಥಾಥ್೯ ಸೋಶಿಯಲ್ ನ ಸ್ಥಾಪಕ ಈಶ್ವರ್ ಪ್ರಸಾದ್ ಶೆಟ್ಟಿ, ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ನ ಅಧ್ಯಕ್ಷ ರಮೇಶ್ ಶೆಟ್ಟಿ, ಭಾಗವಹಿಸಲಿದ್ದಾರೆ.

ಬಳಿಕ ರವೀಂದ್ರ ಪ್ರಭು ತಂಡದಿಂದ “ರಾಗ್ ರಂಗ್” ಸಂಗೀತ ರಸಂಜರಿ, ಅರವಿಂದ ಬೋಳಾರ್, ಉಮೇಶ್ ಮಿಜಾರ್ ಅವರಿಂದ “ಕಲಿವಲಿ ಕಾಮಿಡಿ”, ಪುಷ್ಪರಾಜ್ ಬೊಳ್ಳಾರ್ ರವಿರಾಮಕುಂಜ, ರಾಘವೇಂದ್ರ ರೈ ತಂಡದಿಂದ ಹಾಸ್ಯ ಕಾರ್ಯಕ್ರಮ ನಡೆಯಲಿದೆ ಎಂದು ರಂಗಚಾವಡಿ ಸಂಸ್ಥೆಯ ಪ್ರಕಟನೆ ತಿಳಿಸಿದೆ.