ಮಂಗಳೂರು: ರೋಹನ್ ಕಾರ್ಪೊರೇಶನ್ ಸಂಸ್ಥೆಯ ಸ್ಥಾಪಕ ಡಾ.ರೋಹನ್ ಮೊಂತೆರೋ ರವರು ಲಯನ್ಸ್ ಜಿಲ್ಲಾ 317D ರ ‘ಸನ್ಮಿತ್ರ’ ಜಿಲ್ಲಾ ಡೈರೆಕ್ಟರಿಯನ್ನು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಲಯನ್ಸ್ ಕ್ಲಬ್‌ಗಳು ಕೈಗೊಂಡಿರುವ ವಿವಿಧ ಸೇವಾ ಚಟುವಟಿಕೆಗಳನ್ನು ಮೆಚ್ಚಿಕೊಂಡು, “ಲಯನ್ಸ್ ಜಿಲ್ಲಾ 317D ಕೈಗೊಂಡಿರುವ ಸಮಾಜಮುಖಿ ಕಾರ್ಯಕ್ರಮಗಳಿಗೆ ಬೆಂಬಲ ನೀಡಲು ನನಗೆ ಸಂತೋಷವಾಗಿದೆ” ಎಂದು ಹೇಳಿದರು. ಈ ಜಿಲ್ಲೆಯಲ್ಲಿ ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಾದ್ಯಂತ 120ಕ್ಕೂ ಹೆಚ್ಚು ಕ್ಲಬ್‌ಗಳು ಕಾರ್ಯನಿರ್ವಹಿಸುತ್ತಿವೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಲಯನ್ಸ್ ಜಿಲ್ಲಾ ಗವರ್ನರ್ ಕುಡ್ಪಿ ಅರವಿಂದ ಶೆಣೈ, ಜಿಲ್ಲಾ ಖಜಾಂಚಿ ಬಾಲಕೃಷ್ಣ ಹೆಗ್ಡೆ, ಹೆಚ್ಚುವರಿ ಕಾರ್ಯದರ್ಶಿ ಚಂದ್ರಹಾಸ್ ರೈ, ಡೈರೆಕ್ಟರಿ ಸಂಪಾದಕಿ ಗೀತಾ ಕಲ್ಯಾಣಪುರ, ನ್ಯಾನ್ಸಿ ಮಸ್ಕರೆನಸ್, ದಯಾವತಿ ಮೆಂಡೋನ್, ಲಿಡಿಯಾ ಡಿ’ಕೋಸ್ಟಾ, ಹೇಮಾ ರಾವ್, ಸೀಮಾ ಮಯ್ಯಾ ಮತ್ತು ಮೊಹಿದಿನ್ ಕುಂಞಿ ಉಪಸ್ಥಿತರಿದ್ದರು.