“ತಿಮರೋಡಿ, ಮಟ್ಟೆಣ್ಣನವರ್, ಜಯಂತ್, ವಿಠಲಗೌಡರನ್ನು ಎಸ್ಐಟಿ ಪೊಲೀಸರು ದೌರ್ಜನ್ಯ ಮಾಡುವಂತಿಲ್ಲ“ -ಹೈಕೋರ್ಟ್

ಬೆಂಗಳೂರು: ಮುಂದಿನ ವಿಚಾರಣೆಯವರೆಗೆ ಧರ್ಮಸ್ಥಳ ಪ್ರಕರಣಕ್ಕೆ ತಡೆಯಾಜ್ಞೆ ನೀಡಲಾಗಿದ್ದು ಎಸ್ ಐಟಿ ಪೊಲೀಸರು ಅಂತಿಮ ವರದಿ ಸಲ್ಲಿಸುವಂತಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ.
ಅದೇ ರೀತಿ ಗಿರೀಶ್ ಮಟ್ಟೆಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಜಯಂತ್, ವಿಠಲ ಗೌಡರನ್ನು ಎಸ್ಐಟಿ ಪೊಲೀಸರು ದೌರ್ಜನ್ಯ ಮಾಡುವಂತಿಲ್ಲ ಎಂದು ಆದೇಶ ನೀಡಲಾಗಿದೆ.
ಸೌಜನ್ಯ ಹೋರಾಟಗಾರರಾದ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಇತರರು ಎಸ್‌ಐಟಿ (ವಿಶೇಷ ತನಿಖಾ ದಳ) ನೀಡಿರುವ ನೋಟಿಸ್‌ ಕಾನೂನುಬದ್ಧವಾಗಿಲ್ಲ ಎಂದು ಪ್ರಶ್ನಿಸಿ ರಾಜ್ಯ ಉಚ್ಛ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆಗೆ ಹಾಜರಾದಾಗ ತಮ್ಮನ್ನು ಬಂಧಿಸದಂತೆ ಮತ್ತು ತನಿಖೆಗೆ ಸಂಪೂರ್ಣ ಸಹಕಾರ ನೀಡಲು ಸಿದ್ಧವಿರುವುದಾಗಿ ಈ ಅರ್ಜಿಯಲ್ಲಿ ವಿವರಿಸಲಾಗಿತ್ತು.

error: Content is protected !!