BREAKING NEWS!! ಅಪಘಾತದ ಗಾಯಾಳು ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ: ಪುತ್ತೂರಿನ ಮನ್ಸೂರ್ ಆರೆಸ್ಟ್!

ಮಂಗಳೂರು: ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಎನ್ ಜಿ ಸರ್ಕಲ್ ನಿಂದ ಅಂಬ್ಯುಲೆನ್ಸ್ ಗೆ ಉದ್ದೇಶಪೂರ್ವಕವಾಗಿ ದಾರಿ ಬಿಡದೆ ಅಡಚಣೆ ಉಂಟುಮಾಡಿದ ದ್ವಿಚಕ್ರ ವಾಹನ ಸವಾರನ ಮೇಲೆ ಪೊಲೀಸರು ಪ್ರಕರಣ ದಾಖಲಿಸಿ ವಶಕ್ಕೆ ಪಡೆದುಕೊಂಡಿದ್ದಾರೆ.

ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಗ್ರಾಮ ನಿವಾಸಿ ಮಹಮ್ಮದ್ ಮನ್ಸೂರು(38) ಬಂಧಿತ ಆರೋಪಿ.

ಇಂದು(ಅ.30) ಬಿಸಿಲೆ ಘಾಟ್ ಘಾಟ್ ನಲ್ಲಿ ನಡೆದಿದ್ದ ಅಪಘಾತದ ಗಾಯಾಳುಗಳನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆತಂದ ಸಮಯ ಅಲ್ಲಿನ ವೈದ್ಯರು ತುರ್ತು ಚಿಕಿತ್ಸೆ ನೀಡಿದ್ದರು. ಆದರೆ ಗಂಭೀರ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ KA.22.C.1382 ನೇ ಅಂಬ್ಯುಲೆನ್ಸ್ ನಲ್ಲಿ ಪುತ್ತೂರಿನಿಂದ ಮಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಮದ್ಯಾಹ್ನ ಸುಮಾರು 1.30 ಗಂಟೆಗೆ ಅಂಬ್ಯುಲೆನ್ಸ್ ಮುಂದಿನಿಂದ KA.19.EK.0696 ನೇ ದ್ವಿಚಕ್ರ ವಾಹನ ಸವಾರ ಅಂಬ್ಯುಲೆನ್ಸ್ ನ ಸೈರನ್ ಶಬ್ದ ಕೇಳಿಯೂ ಅಂಬ್ಯುಲೆನ್ಸ್ ಗೆ ದಾರಿ ಬಿಟ್ಟು ಕೊಡದೆ ಅಂಬ್ಯುಲೆನ್ಸ್ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ ಘಟನೆ ನಡೆದಿದೆ.

✅Business Offer✅: TUZHAR ಸುಗಂಧ ದ್ರವ್ಯದೊಂದಿಗೆ ನಿಮ್ಮ ಸ್ವಂತ ಉದ್ಯಮದ ಕನಸನ್ನು ನನಸಾಗಿಸಿ. 💰ಕಡಿಮೆ ಹೂಡಿಕೆ, 📦ಕಚ್ಛಾವಸ್ತು ಪೂರೈಕೆ, 📈 ಮಾರ್ಗದರ್ಶನ ಹಾಗೂ ಮಾರಾಟ ಬೆಂಬಲದೊಂದಿಗೆ “ಅಲ್ ನಜೀಮ್ ಅಸ್ ಸಖಿಬ್” ಜೊತೆ ನಿಮ್ಮ ಸ್ವಂತ ವ್ಯವಹಾರ ಪ್ರಾರಂಭಿಸಿ. 📲 +918088947906 🌐 www.tuzharperfumes.com

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸ್ ಠಾಣಾ ಅ.ಕ್ರ 128/2025 ಕಲಂ:110, 125 ಬಿ.ಎನ್.ಎಸ್ ನಂತೆ ಪ್ರಕರಣ ದಾಖಲಿಸಿ ವಶಕ್ಕೆ ಪಡೆದುಕೊಂಡಿದ್ದು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.

error: Content is protected !!