ಮಂಗಳೂರು: ನಗರ ಹೊರವಲಯದ ಕುಡುಪು ಬಳಿ ಎ.27ರಂದು ನಡೆದ ಕೇರಳದ ವಯನಾಡಿನ ಮುಹಮ್ಮದ್ ಅಶ್ರಫ್ ಗುಂಪು ಹತ್ಯೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳಿಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಗುರುವಾರ(ಅ.30) ಜಾಮೀನು ಮಂಜೂರು ಮಾಡಿದೆ.

ಆರೋಪಿಗಳಾದ ಮನೀಶ್ ಶೆಟ್ಟಿ ಮತ್ತು ಅನಿಲ್ ಕುಮಾರ್‌ಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ ಎಂದು ತಿಳಿದು ಬಂದಿದೆ.

ಪ್ರಕರಣ ಸಂಬಂಧ ಪೊಲೀಸರು 21 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದರು. ಅದರಲ್ಲಿ 8 ಮಂದಿಗೆ ಜಾಮೀನು ಸಿಕ್ಕಿದೆ. ಉಳಿದ 13 ಮಂದಿ ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ತಿಳಿದು ಬಂದಿದೆ.