ಡಿವೈಡರ್‌ ನ ಕಬ್ಬಿಣದ ಗ್ರಿಲ್ಲಿಗೆ ರಿಕ್ಷಾ ಡಿಕ್ಕಿ: ಚಾಲಕ ಸ್ಥಿತಿ ಗಂಭೀರ

ಕಾರ್ಕಳ : ರಾ.ಹೆ 169ರ ಮುರತಂಗಡಿ ಪರಿಸರದ ಶ್ರೀ ಬಾಲಾಂಜನೇಯ ಯುವಕ ಸಂಘದ ಆಟದ ಮೈದಾನದ ಮುಂಭಾಗದಲ್ಲಿ ಶುಕ್ರವಾರ(ಅ.31) ಸಂಜೆ ಸುಮಾರು 6:45 ರ ವೇಳೆಗೆ ರಸ್ತೆ ವಿಭಾಜಕದ ಕಬ್ಬಿಣದ ಗ್ರಿಲ್ಲಿಗೆ ರಿಕ್ಷಾ ಡಿಕ್ಕಿ ಹೊಡೆದು ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಮೂಡಬಿದ್ರೆಯಿಂದ ಬರುತ್ತಿದ್ದ ರಿಕ್ಷಾ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ನಜ್ಜುಗುಜ್ಜಾಗಿದ್ದು, ರಿಕ್ಷಾ ಚಾಲಕ ಆನೆಕೆರೆ ರಿಕ್ಷಾ ಗ್ಯಾರೇಜ್ ನ ಮಾಲಕರಾದ ಚಿತ್ರಾಕ್ಷ ಎಂಬುವರಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಸ್ಥಳೀಯರು ಸಾಣೂರಿನ ಖಾಸಗಿ ಆಸ್ಪತ್ರೆಗೆ ತುರ್ತು ಚಿಕಿತ್ಸೆಗಾಗಿ ದಾಖಲಿಸಿದ್ದಾರೆ.

✅Business Offer✅: TUZHAR ಸುಗಂಧ ದ್ರವ್ಯದೊಂದಿಗೆ ನಿಮ್ಮ ಸ್ವಂತ ಉದ್ಯಮದ ಕನಸನ್ನು ನನಸಾಗಿಸಿ. 💰ಕಡಿಮೆ ಹೂಡಿಕೆ, 📦ಕಚ್ಛಾವಸ್ತು ಪೂರೈಕೆ, 📈 ಮಾರ್ಗದರ್ಶನ ಹಾಗೂ ಮಾರಾಟ ಬೆಂಬಲದೊಂದಿಗೆ “ಅಲ್ ನಜೀಮ್ ಅಸ್ ಸಖಿಬ್” ಜೊತೆ ನಿಮ್ಮ ಸ್ವಂತ ವ್ಯವಹಾರ ಪ್ರಾರಂಭಿಸಿ. 📲 +918088947906 🌐 www.tuzharperfumes.com

ರಾತ್ರಿ ವಾಹನಗಳು ಚಲಿಸುವಾಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಡೈವರ್ಶನ್ ಬಳಿ ರಿಫ್ಲೆಕ್ಟರ್ ಅಥವಾ ಬ್ಲಿಂಕರ್ಗಳನ್ನು ಅಳವಡಿಸದೇ ಇರುವುದರಿಂದ ವಾಹನಗಳು ಡಿಕ್ಕಿ ಹೊಡೆದು ಅಪಘಾತಗಳು ಸಂಭವಿಸುತ್ತಿರುತ್ತವೆ.

ರಾಷ್ಟ್ರೀಯ ಹೆದ್ದಾರಿ ಇಲಾಖಾಧಿಕಾರಿಗಳು ಕೂಡಲೇ ಎಚ್ಚೆತ್ತು ವಾಹನಗಳ ಸುರಕ್ಷತೆಗಾಗಿ ತುರ್ತು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿಯ ಪ್ರಮುಖರಾದ ಸಾಣೂರು ನರಸಿಂಹ ಕಾಮತ್ ರವರು ಹೆದ್ದಾರಿ ಇಲಾಖೆಯವರಿಗೆ ಎಚ್ಚರಿಕೆ ನೀಡಿದ್ದಾರೆ.

error: Content is protected !!