ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಹಿಂದೆ ಪಿಎಫ್‌ಐ! ಎನ್‌ಐಎ ಚಾರ್ಜ್‌ಶೀಟಲ್ಲಿ ಉಲ್ಲೇಖ

ಮಂಗಳೂರು: ಹಿಂದೂ ಕಾರ್ಯಕರ್ತ, ರೌಡಿ ಶೀಟರ್‌ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ಐಎ ಇದೀಗ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದೆ. ಈ ಕೊಲೆಯಲ್ಲಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆ ಸದಸ್ಯರ ಕೈವಾಡ ಇರುವ ಬಗ್ಗೆ ಎನ್ಐಎ ತನ್ನ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದೆ.

2025ರ ಮೇ 1ರಂದು ಬಜಪೆ ಬಳಿ ಸುಹಾಸ್ ಶೆಟ್ಟಿ ಹತ್ಯೆ ನಡೆದಿದ್ದು, ಜಿಲ್ಲೆಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಹತ್ಯೆ ಹಿಂದೆ ಉಗ್ರ ಸಂಘಟನೆಗಳ ಕೈವಾಡವಿದೆ ಎಂದು ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ಆರೋಪಿಸಿದ್ದು, ಎನ್‌ಐಎ ಹಸ್ತಾಂತರಿಸುವಂತೆ ಆಗ್ರಹಿಸಿದ್ದರು. ಹೀಗಾಗಿ ಪ್ರಕರಣವನ್ನು ಗೃಹ ಇಲಾಖೆ ನಿರ್ದೇಶನದ ಮೇರೆಗೆ ಎನ್ಐಗೆ ಹಸ್ತಾಂತರ ಮಾಡಲಾಗಿತ್ತು.

ಸುಹಾಸ್ ಶೆಟ್ಟಿಯ ಚಟುವಟಿಕೆಗಳ ಮೇಲೆ ಹಲವಾರು ತಿಂಗಳ ಕಾಲ ಕಣ್ಣಿಟ್ಟಿದ್ದ ತಂಡ ಹತ್ಯೆಗೆ ಸಂಚು ರೂಪಿಸಿತ್ತು. ಸುಹಾಸ್ ಶೆಟ್ಟಿ ಹತ್ಯೆ ಎಲ್ಲಿ ಮಾಡಬೇಕು, ಹೇಗೆ ಮಾಡಬೇಕು, ತಪ್ಪಿಸಿಕೊಂಡರೆ ಏನು ಮಾಡ್ಬೇಕು? ಪ್ರತಿದಾಳಿಯಾದರೆ ಹೇಗೆ ಪ್ರತಿಕ್ರಿಯಿಸಬೇಕು ಎನ್ನುವುದನ್ನು ತಂಡ ಮೊದಲೇ ಪ್ಲಾನ್ ಮಾಡಲಾಗಿತ್ತು. ಹತ್ಯೆಯ ದಿನ ಆರೋಪಿಗಳಿಂದ ಎರಡು ಕಾರುಗಳು ಬಳಕೆ ಮಾಡಲಾಗಿತ್ತು ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. ಸುಹಾಸ್ ಶೆಟ್ಟಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಹಿಂಬಾಲಿಸಿ ಹತ್ಯೆ ಮಾಡಲಾಗಿದೆ. ಇನೋವಾ ಕಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಮತ್ತೊಂದು ವಾಹನದಿಂದ ಮುಂಭಾಗ ತಡೆ ಒಡ್ಡಲಾಗಿತ್ತು. ಹೀಗಾಗಿ ಸುಹಾಸ್ ಶೆಟ್ಟಿ ತಪ್ಪಿಸಿಕೊಳ್ಳಲು ಸಾಧ್ಯವಾಗದ ರೀತಿಯಲ್ಲಿ ಸಂಚು ರೂಪಿಸಿ ಹತ್ಯೆ ಮಾಡಲಾಗಿತ್ತು.

ಸಫ್ವಾನ್‌ ರೂವಾರಿ
ಹತ್ಯೆ ಸಂಚಿನ ರೂವಾರಿ ಅಬ್ದುಲ್ ಸಫ್ವಾನ್ ಅಲಿಯಾಸ್ ಕಳವಾರು ಸಫ್ವಾನ್ ಎನ್ನುವುದನ್ನು ಎನ್‌ಐಎ ಉಲ್ಲೇಖಿಸಿದೆ. ಈತ ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI)ದ ಸದಸ್ಯ. ಕಳವಾರು ಸಫ್ವಾನ್ ಜೊತೆ ಜೊತೆಗೆ ನಿಯಾಜ್ ಅಲಿಯಾಸ್ ನಿಯಾ, ಮಹಮ್ಮದ್ ಮುಸಾಮಿರ್ ಅಲಿಯಾಸ್ ಮಹಮ್ಮದ್ ಮುಸಾಮೀರ್, ಮಹಮ್ಮದ್ @ ಮುಜಮ್ಮಿಲ್, ನೌಶಾದ್ ಅಲಿಯಾಸ್ ವಾಮಂಜೂರ್ ನೌಶಾದ್ ಅಲಿಯಾಸ್ ಚೊಟ್ಟೆ ನೌಶಾದ್ ಹಾಗೂ ಮತ್ತೊಬ್ಬ ನಿಷೇಧಿದ ಪಿಎಫ್ಐ ಸದಸ್ಯ ಆದಿಲ್ ಮಹರೂಫ್ ಸಹಕಾರ ನೀಡಿದ್ದಾರೆ ಎಂದು ಎನ್‌ಐಎ ಆರೋಪಿಸಿದೆ.

✅Business Offer: TUZHAR ಮೂಲಕ ನಿಮ್ಮ ಸ್ವಂತ ಉದ್ಯಮದ ಕನಸನ್ನು ನನಸಾಗಿಸಿ. ಕಡಿಮೆ ಹೂಡಿಕೆ, ಕಚ್ಛಾವಸ್ತು ಪೂರೈಕೆ, ಮಾರುಕಟ್ಟೆ ಮಾರ್ಗದರ್ಶನ ಹಾಗೂ ಮಾರಾಟ ಬೆಂಬಲದೊಂದಿಗೆ “ಅಲ್ ನಜೀಮ್ ಅಸ್ ಸಖಿಬ್” ಸುಗಂಧ ದ್ರವ್ಯ ವ್ಯಾಪಾರಿಗಳೊಂದಿಗೆ ಸುಗಂಧ ದ್ರವ್ಯ ವ್ಯವಹಾರ ಪ್ರಾರಂಭಿಸಿ ಸ್ವಾವಲಂಬಿಗಳಾಗಿ 📲 +918088947906

ಆದಿಲ್ ಮಹರೂಫ್ ಹಣಕಾಸು
ಆದಿಲ್ ಮಹರೂಫ್ (ಅಲಿಯಾಸ್ ಆದಿಲ್) ಈ ಸಂಚಿಗೆ ಹಣಕಾಸು ಒದಗಿಸಿದ್ದು ತನಿಖೆಯಲ್ಲಿ ದೃಢಪಟ್ಟಿದೆ. ಆರೋಪಿಗಳೊಂದಿಗೆ ಕಲಂದರ್ ಶಾಫಿ ಅಲಿಯಾಸ್ ಮಂಡೆ ಶಾಫಿ, ಎಂ. ನಾಗರಾಜ ಅಲಿಯಾಸ್ ನಾಗ @ ಅಪ್ಪು, ರಂಜಿತ್, ಮಹಮ್ಮದ್ ರಿಜ್ವಾನ್ ಅಲಿಯಾಸ್ ರಿಜ್ಜು, ಅಜರುದ್ದೀನ್ ಅಲಿಯಾಸ್ ಅಜರ್ ಅಲಿಯಾಸ್ ಅಜ್ಜು, ಅಬ್ದುಲ್ ಖಾದರ್ ಅಲಿಯಾಸ್ ನೌಫಲ್ ವಿರುದ್ಧವೂ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಅಬ್ದುಲ್ ರಜಾಕ್ ವಿರುದ್ಧ ತನಿಖೆ ಮುಂದುವರಿದಿದೆ. ನಿಷೇಧಿತ ಪಿಎಫ್ಐ ಸಂಘಟನೆ ದೇಶದಲ್ಲಿ ಸಕ್ರಿಯವಾಗಿರುವುದು ಹಾಗೂ ಹಲವಾರು ಸ್ಲೀಪರ್‌ ಸೆಲ್‌ಗಳು ಇದರ ಪರವಾಗ ಕಾರ್ಯಾಚರಿಸುತ್ತಿರುವುದು ಈ ಘಟನೆಯಿಂದ ಗೊತ್ತಾಗಿದೆ. ದೇಶದಲ್ಲಿ ಇನ್ನಷ್ಟು ಹಿಂದೂ ಮುಖಂಡರನ್ನು ಟಾರ್ಗೆಟ್ ಮಾಡಲಾಗಿದ್ದು, ಅವರನ್ನೂ ಹತ್ಯಗೈಯಲು ಸಂಚು ಹೆಣೆಯುತ್ತಿರುವ ಬಗ್ಗೆಯೂ ಎನ್‌ಐಎ ಉಲ್ಲೇಖಿಸಿದೆ.

error: Content is protected !!