ಕರ್ನಾಟಕ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದ ಪ್ರಧಾನಿ

ನವದೆಹಲಿ: ಕರ್ನಾಟಕದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕನ್ನಡ ರಾಜ್ಯೋತ್ಸವದ ಶುಭಾಶಯವನ್ನು ಕೋರಿದ್ದಾರೆ.

“ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ” ಎಂದು ಕನ್ನಡಿಗರಿಗೆ ಕನ್ನಡದಲ್ಲೇ ರಾಜ್ಯೋತ್ಸವ ಶುಭಾಶಯ ತಿಳಿಸಿ ಮೋದಿ ಎಕ್ಸ್ ಪೋಸ್ಟ್ ಹಂಚಿಕೊಂಡಿದ್ದಾರೆ.

✅Business Offer✅: TUZHAR ಸುಗಂಧ ದ್ರವ್ಯದೊಂದಿಗೆ ನಿಮ್ಮ ಸ್ವಂತ ಉದ್ಯಮದ ಕನಸನ್ನು ನನಸಾಗಿಸಿ. 💰ಕಡಿಮೆ ಹೂಡಿಕೆ, 📦ಕಚ್ಛಾವಸ್ತು ಪೂರೈಕೆ, 📈 ಮಾರ್ಗದರ್ಶನ ಹಾಗೂ ಮಾರಾಟ ಬೆಂಬಲದೊಂದಿಗೆ “ಅಲ್ ನಜೀಮ್ ಅಸ್ ಸಖಿಬ್” ಜೊತೆ ನಿಮ್ಮ ಸ್ವಂತ ವ್ಯವಹಾರ ಪ್ರಾರಂಭಿಸಿ. 📲 +918088947906 🌐 www.tuzharperfumes.com

“ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ಕರ್ನಾಟಕದ ಜನರು ಸಂತೋಷ ಮತ್ತು ಆರೋಗ್ಯದಿಂದ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ” ಎಂದು ಪೋಸ್ಟ್ ಮಾಡಿದ್ದಾರೆ.

error: Content is protected !!