ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಕನ್ಗೆರೆ ಗ್ರಾಮದಲ್ಲಿ ಯುವಕನೋರ್ವ ವಿಷ ಸೇವಿಸಿ, ಬಳಿಕ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು(ನ.1) ನಡೆದಿದೆ.

ಜೀವಿತ್ (32) ಆತ್ಮಹತ್ಯೆ ಮಾಡಿಕೊಂಡ ಯುವಕ.
ಅಗ್ನಿಶಾಮಕ ದಳ, ಪೊಲೀಸರು ಹಾಗೂ ಸ್ಥಳೀಯ ಸಾಮಾಜಿಕ ಕಾರ್ಯಕರ್ತರು ಶವವನ್ನು ಮೇಲೆತ್ತುವ ಕಾರ್ಯದಲ್ಲಿ ಭಾಗವಹಿಸಿದ್ದರು. ಆತ್ಮಹತ್ಯೆಗೆ ಕಾರಣ ಏನೆಂಬುದು ಇನ್ನೂ ತಿಳಿದು ಬಂದಿಲ್ಲ.

ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.