
ಮಂಗಳೂರು: ಬಸ್ಸನ್ನು ಓವರ್ಟೇಕ್ ಮಾಡುವ ವೇಳೆ ಕಾರೊಂದು ನಿಯಂತ್ರಣ ಕಳೆದುಕೊಂಡು ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕನ ನಾಲ್ಕೂವರೆ ವರ್ಷದ ಮಗು ದಾರುಣ ಮೃತಪಟ್ಟಿರುವ ಘಟನೆ ಪುತ್ತೂರು ಸಮೀಪದ ಪರ್ಪುಂಜ ಕೊಯಿಲತ್ತಡ್ಕದಲ್ಲಿ ನಡೆದಿದೆ. ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸುಳ್ಯ ಕಡೆಯಿಂದ ಪುತ್ತೂರಿನತ್ತ ತೆರಳುತ್ತಿದ್ದ ಕಾರು ಚಾಲಕ ಬಸ್ ಓವರ್ಟೇಕ್ ಮಾಡಲು ಯತ್ನಿಸಿದ್ದಾನೆ. ಈ ವೇಳೆ ನಿಯಂತ್ರಣ ಕಳೆದುಕೊಂಡ ಕಾರು ಪುತ್ತೂರಿನಿಂದ ತಿಂಗಳಾಡಿ ಕಡೆಗೆ ತೆರಳುತ್ತಿದ್ದ ಆಟೋಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಆಟೋ ಚಾಲಕ ಹನೀಫ್ ಬನ್ನೂರು ಅವರ ಮಗಳು ಶಜ್ವಾ ಫಾತಿಮಾ ಸಾವನ್ನಪ್ಪಿದ್ದಾಳೆ. ಹನೀಫ್, ಪತ್ನಿ, ಇಬ್ಬರು ಮಕ್ಕಳು ಮತ್ತು ಅತ್ತೆಗೆ ಗಾಯಗಳಾಗಿವೆ.