ಎಸ್.ಕೋಡಿ: ಕಾರ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು!

ಮುಲ್ಕಿ: ಕಾರ್ ಡಿಕ್ಕಿಹೊಡೆದು ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ಸವಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಘಟನೆ ಕಿನ್ನಿಗೋಳಿ-ಎಸ್.ಕೋಡಿ ಬಳಿಯ ರೋಹನ್ ಎಸ್ಟೇಟ್ ಮುಂಭಾಗ ನಡೆದಿದೆ.

ಘಟನೆಯಿಂದ ಮುಲ್ಕಿ ಪುನರೂರು ಮೊಗೇರ ದೈವಸ್ಥಾನ ಬಳಿಯ ನಿವಾಸಿಗಳಾದ ಸುರೇಂದ್ರ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದರು. ರವಿವಾರ ಸಂಜೆ ಸಾವನ್ನಪ್ಪಿದ್ದು ಹಿಂಬದಿ ಸವಾರ ಸಂದೀಪ್ ಯಾನೆ ಲೋಲಾಕ್ಷ ಎಂಬವರಿಗೆ ಅಲ್ಪಪ್ರಮಾಣದ ಗಾಯಗಳಾಗಿವೆ.

✅Business Offer✅: TUZHAR ಸುಗಂಧ ದ್ರವ್ಯದೊಂದಿಗೆ ನಿಮ್ಮ ಸ್ವಂತ ಉದ್ಯಮದ ಕನಸನ್ನು ನನಸಾಗಿಸಿ. 💰ಕಡಿಮೆ ಹೂಡಿಕೆ, 📦ಕಚ್ಛಾವಸ್ತು ಪೂರೈಕೆ, 📈 ಮಾರ್ಗದರ್ಶನ ಹಾಗೂ ಮಾರಾಟ ಬೆಂಬಲದೊಂದಿಗೆ “ಅಲ್ ನಜೀಮ್ ಅಸ್ ಸಖಿಬ್” ಜೊತೆ ನಿಮ್ಮ ಸ್ವಂತ ವ್ಯವಹಾರ ಪ್ರಾರಂಭಿಸಿ. 📲 +918088947906 🌐 www.tuzharperfumes.com

ಗಾಯಾಳುಗಳು ಎಸ್. ಕೋಡಿಯಾಗಿ ಹಳೆಯಂಗಡಿ ಕಡೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಅತಿಯಾದ ವೇಗ ಮತ್ತು ನಿರ್ಲಕ್ಷ್ಯದ ಚಾಲನೆ ಮಾಡಿಕೊಂಡು ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿತ್ತು.

error: Content is protected !!