ಭೀಕರ ಅಪಘಾತ: ಬಸ್ ಮೇಲೆ ಟಿಪ್ಪರ್ ಮುಗುಚಿ 17 ಜನ ಸಾವು !

ಹೈದರಾಬಾದ್ : ಸರ್ಕಾರಿ ಬಸ್ ಮೇಲೆ ಟಿಪ್ಪರ್ ಮುಗುಚಿ 17 ಮಂದಿ ಸಾವನ್ನಪ್ಪಿರುವ ಘಟನೆ ಇಂದು(ನ.03) ಬೆಳಗ್ಗೆ ಸಂಭವಿಸಿದೆ.

ತಾಂಡೂರು ಡಿಪೋಗೆ ಸೇರಿದ ಕೆ.ಎಸ್‌.ಆರ್.ಟಿಸಿ ಬಸ್ ಗೆ ಜಲ್ಲಿಕಲ್ಲು ತುಂಬಿಕೊಂಡು ಬರುತ್ತಿದ್ದ ಟಿಪ್ಪರ್ ಡಿಕ್ಕಿ ಹೊಡೆದಿದ್ದು, ಚೇವೆಲ್ಲಾ ಮಂಡಲದ ಮಿರ್ಜಾಗುಡಾ ಬಳಿ ಈ ಘಟನೆ ನಡೆದಿದೆ.

✅Business Offer✅: TUZHAR ಸುಗಂಧ ದ್ರವ್ಯದೊಂದಿಗೆ ನಿಮ್ಮ ಸ್ವಂತ ಉದ್ಯಮದ ಕನಸನ್ನು ನನಸಾಗಿಸಿ. 💰ಕಡಿಮೆ ಹೂಡಿಕೆ, 📦ಕಚ್ಛಾವಸ್ತು ಪೂರೈಕೆ, 📈 ಮಾರ್ಗದರ್ಶನ ಹಾಗೂ ಮಾರಾಟ ಬೆಂಬಲದೊಂದಿಗೆ “ಅಲ್ ನಜೀಮ್ ಅಸ್ ಸಖಿಬ್” ಜೊತೆ ನಿಮ್ಮ ಸ್ವಂತ ವ್ಯವಹಾರ ಪ್ರಾರಂಭಿಸಿ. 📲 +918088947906 🌐 www.tuzharperfumes.com

ಬಸ್ ಮೇಲೆ ಜಲ್ಲಿಕಲ್ಲು ಲೋಡ್ ಬಿದ್ದಿದ್ದು, ಹಲವು ಪ್ರಯಾಣಿಕರು ಅದರಲ್ಲಿ ಸಿಲುಕಿಕೊಂಡರು. ಈ ಅಪಘಾತದಲ್ಲಿ ಟಿಪ್ಪರ್ ಚಾಲಕ ಸೇರಿ 16 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರಲ್ಲಿ 15 ತಿಂಗಳ ಮಗುವೂ ಸೇರಿದೆ. ಈ ಘಟನೆಯಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಅನೇಕ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ವೇಳೆ ಬಸ್‌ನಲ್ಲಿ 70 ಮಂದಿ ಪ್ರಯಾಣಿಸುತ್ತಿದ್ದರು. ಸ್ಥಳಕ್ಕಾಗಮಿಸಿದ ಪೊಲೀಸರು ಜೆಸಿಬಿ ಸಹಾಯದಿಂದ ರಕ್ಷಣಾ ಕಾರ್ಯ ಆರಂಭಿಸಿದ್ದಾರೆ.

ಈ ಅಪಘಾತದಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಮತ್ತು ನೌಕರರು ಎಂದು ಪೊಲೀಸರು ಹೇಳುತ್ತಾರೆ. ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳು ಪ್ರತಿದಿನ ಬೆಳಿಗ್ಗೆ ಹೈದರಾಬಾದ್‌ಗೆ ಹೋಗುತ್ತಾರೆ. ಭಾನುವಾರ ರಜೆ ಇದ್ದ ಕಾರಣ ಕೆಲವರು ತಮ್ಮ ಮನೆಗಳಿಗೆ ತೆರಳಿ ವಾಪಸ್ ಪ್ರಯಾಣ ಬೆಳೆಸಿದರು. ಈ ಅವಘಡದಿಂದಾಗಿ ಹೈದರಾಬಾದ್-ಬಿಜಾಪುರ ರಸ್ತೆಯಲ್ಲಿ ಭಾರಿ ಸಂಚಾರ ಅಸ್ತವ್ಯಸ್ತವಾಗಿತ್ತು. ತಾಂಡೂರಿನಿಂದ ಹೈದರಾಬಾದ್‌ಗೆ ಹೋಗುತ್ತಿದ್ದಾಗ ಈ ಬಸ್ ನಡೆದಿದೆ.

error: Content is protected !!