ಬಂಟ್ವಾಳ: ವಿಟ್ಲದ ಅಳಿಕೆಯಲ್ಲಿ ತೆಂಗಿನಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ನಡೆದಿದೆ.

ಅಳಿಕೆ ಗ್ರಾಮದ ನಿವಾಸಿ ಇಬ್ರಾಹಿಂ ಉಸ್ತಾದ್ ಅವರ ಪುತ್ರ ಇಸ್ಮಾಯಿಲ್ ಮೃತ ವ್ಯಕ್ತಿ.

ಇಸ್ಮಾಯಿಲ್ ಕಬ್ಬಿಣದ ದೋಟಿ ಬಳಸಿ ತೆಂಗಿನ ಮರದಿಂದ ತೆಂಗಿನಕಾಯಿ ಕೀಳುತ್ತಿದ್ದ ವೇಳೆ ದೋಟಿ ವಿದ್ಯುತ್ ತಂತಿಗೆ ಸ್ಪರ್ಶಿಸಿದ್ದು, ಈ ವೇಳೆ ವಿದ್ಯುತ್ ಶಾಕ್ ಹೊಡೆದಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ ಅವರು ಮೃತಪಟ್ಟಿದ್ದಾರೆ.