
ಚೆನ್ನೈ: ತಮಿಳುನಾಡಿನ ಕೊಯಮತ್ತೂರಿನ ವಿಮಾನ ನಿಲ್ದಾಣದ ಬಳಿಕ ಭಾನುವಾರ ಖಾಸಗಿ ಮಹಿಳಾ ಖಾಸಗಿ ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಇಂದು(ನ.4) ಮುಂಜಾನೆ ಮೂವರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ.

ತವಾಸಿ, ಕಾರ್ತಿಕ್ ಹಾಗೂ ಕಾಲೀಶ್ವರನ್ ಬಂಧಿತ ಆರೋಪಿ.
ಕೊಯಮತ್ತೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯಾಗಿರುವ ಆ ಮಹಿಳೆ ತನ್ನ ಪುರುಷ ಸ್ನೇಹಿತನೊಂದಿಗೆ ಕಾರಿನಲ್ಲಿ ಹೋಗುತ್ತಿದ್ದಾಗ ಆರೋಪಿಗಳು ಆಕೆಯನ್ನು ಅಪಹರಿಸಿ, ಬಲವಂತವಾಗಿ ಬೇರೆ ಸ್ಥಳಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ . ಈ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಲು ಪೊಲೀಸ್ ಇಲಾಖೆ ಏಳು ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಇಂದು ಮುಂಜಾನೆ ಆರೋಪಿಗಳು ಇರುವ ಸ್ಥಳವನ್ನು ಖಚಿತ ಮಾಹಿತಿ ಮೇರೆಗೆ ಗುರುತಿಸಿ ಸ್ಥಳಕ್ಕೆ ತೆರಳಿದ್ದ ಪೊಲೀಸರೊಂದಿಗೆ ಆರೋಪಿಗಳು ಘರ್ಷಣೆಗೆ ಇಳಿದಿದ್ದರು. ಈ ವೇಳೆ ಪೊಲೀಸರೊಂದಿಗೆ ಸಣ್ಣ ಗುಂಡಿನ ಚಕಮಕಿ ನಡೆದಿದ್ದು, ಬಳಿಕ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಸದ್ಯ ಮೂವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಗಳು ಉಲ್ಲೇಖಿಸಿವೆ.