
ಮಂಗಳೂರು: ಕದ್ರಿ ಪಾರ್ಕ್ ನ ರಸ್ತೆಗೆ ಟೋಲ್ ಸಿಸ್ಟಮ್ ರೀತಿಯ ಪಾರ್ಕಿಂಗ್ ಶುಲ್ಕಕ್ಕೆ ಸ್ಮಾರ್ಟ್ ಸಿಟಿ ನಿರ್ಧರಿಸಿದೆ. ಪ್ರತಿನಿತ್ಯ ಸಾವಿರಾರು ಮಂದಿ, ಕದ್ರಿ ಪಾರ್ಕ್ ಗೆ ಬರುತ್ತಾರೆ. ಅತ್ಯಾಧುನಿಕ ತಂತ್ರಜ್ಞಾನ ಬಳಸಿ, ವಾಹನದ ನಂಬರ್ ಪ್ಲೇಟ್ ಇಮೇಜ್ ಸೆರೆಹಿಡಿದು ವಾಹನದ ಫಾಸ್ಟ್ ಟ್ಯಾಗ್‌ಗೆ ಲಿಂಕ್ ಮಾಡಲಾಗುತ್ತದೆ.

5 ನಿಮಿಷದ ಒಳಗೆ ತೆರಳಿದ್ರೆ ಯಾವುದೇ ಶುಲ್ಕ ಕಟ್ ಆಗಲ್ಲ. ಹೆಚ್ಚಾದ್ರೆ, 50ರೂ. ಹಣ ಕಟ್ ಆಗಲಿದೆ. ಇನ್ನೂ, ಟೋಲ್ ರೀತಿಯ ಹಣ ಸಂಗ್ರಹಕ್ಕೆ ಮುಂದಾಗಲಿರುವ ಸ್ಮಾರ್ಟ್ ಸಿಟಿ ಕ್ರಮದ ವಿರುದ್ಧ ಸಾರ್ವಜನಿಕ ವಲಯದಲ್ಲಿ ವಿರೋಧ ವ್ಯಕ್ತವಾಗಿದೆ.