ಜಟ್ಟಿಪಳ್ಳ ಅಪಘಾತ : ಗಂಭೀರ ಗಾಯಗೊಂಡು ರಸ್ತೆಗೆ ಬಿದ್ದ ರಿಕ್ಷಾ ಚಾಲಕ ಸಾವು!

ಸುಳ್ಯ: ಜಟ್ಟಿಪಳ್ಳದಲ್ಲಿ ನಡೆದ ಅಪಘಾತದಲ್ಲಿ ರಿಕ್ಷಾದಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ರಿಕ್ಷಾ ಚಾಲಕ ಬುಧವಾರ ಮುಂಜಾನೆ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಪ್ರಭಾಕರ್ ಅಪಘಾತದಲ್ಲಿ ಮೃತಪಟ್ಟ ರಿಕ್ಷಾ ಚಾಲಕ.

✅Business Offer✅: TUZHAR ಸುಗಂಧ ದ್ರವ್ಯದೊಂದಿಗೆ ನಿಮ್ಮ ಸ್ವಂತ ಉದ್ಯಮದ ಕನಸನ್ನು ನನಸಾಗಿಸಿ. 💰ಕಡಿಮೆ ಹೂಡಿಕೆ, 📦ಕಚ್ಛಾವಸ್ತು ಪೂರೈಕೆ, 📈 ಮಾರ್ಗದರ್ಶನ ಹಾಗೂ ಮಾರಾಟ ಬೆಂಬಲದೊಂದಿಗೆ “ಅಲ್ ನಜೀಮ್ ಅಸ್ ಸಖಿಬ್” ಜೊತೆ ನಿಮ್ಮ ಸ್ವಂತ ವ್ಯವಹಾರ ಪ್ರಾರಂಭಿಸಿ. 📲 +918088947906 🌐 www.tuzharperfumes.com

ನ.3ರಂದು ಸಂಜೆ 6.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಪ್ರಭಾಕರ್ ರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ವೈದ್ಯರ ಸಲಹೆ ಮೇರೆಗೆ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಅವರು ಬುಧವಾರ ಮುಂಜಾನೆ ಮೃತಪಟ್ಟಿದ್ದಾರೆ.

error: Content is protected !!