ನೇಣು ಬಿಗಿದ ಸ್ಥಿತಿಯಲ್ಲಿ ಹಾಸ್ಟೆಲ್ ನಲ್ಲಿ ಕಾಲೇಜು ವಿದ್ಯಾರ್ಥಿನಿ ಶವ ಪತ್ತೆ!

ಶಿವಮೊಗ್ಗ: ಶಿವಮೊಗ್ಗದ ಹಾಸ್ಟೆಲ್ ಟೆರಸ್ ಮೇಲೆ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಭದ್ರಾವತಿ ತಾಲೂಕಿನ ದೊಡ್ಡೇರಿ ಗಂಗೂರು ಗ್ರಾಮದ ನಿವಾಸಿ ಟಿ.ಸಿ.ವನೀಷಾ (21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

✅Business Offer✅: TUZHAR ಸುಗಂಧ ದ್ರವ್ಯದೊಂದಿಗೆ ನಿಮ್ಮ ಸ್ವಂತ ಉದ್ಯಮದ ಕನಸನ್ನು ನನಸಾಗಿಸಿ. 💰ಕಡಿಮೆ ಹೂಡಿಕೆ, 📦ಕಚ್ಛಾವಸ್ತು ಪೂರೈಕೆ, 📈 ಮಾರ್ಗದರ್ಶನ ಹಾಗೂ ಮಾರಾಟ ಬೆಂಬಲದೊಂದಿಗೆ “ಅಲ್ ನಜೀಮ್ ಅಸ್ ಸಖಿಬ್” ಜೊತೆ ನಿಮ್ಮ ಸ್ವಂತ ವ್ಯವಹಾರ ಪ್ರಾರಂಭಿಸಿ. 📲 +918088947906 🌐 www.tuzharperfumes.com

ಶಿವಮೊಗ್ಗದ ಖಾಸಗಿ ಕಾಲೇಜಿನಲ್ಲಿ ತೃತೀಯ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದಳು. ಇಂದು(ನ.05) ಬೆಳಗ್ಗೆ 10.15ರ ಸುಮಾರಿಗೆ ಕೋಟೆ ರಸ್ತೆ ಬಳಿಯಿರುವ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್‌ನ ಟೆರಸ್ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

https://youtu.be/LOBT-zgeW9Qಬೆಳಗ್ಗೆಯ ತಿಂಡಿ ಸೇವಿಸಿದ ನಂತರ ವಿದ್ಯಾರ್ಥಿನಿ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾಳೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಸ್ಟೆಲ್ ನ ಇತರೆ ವಿದ್ಯಾರ್ಥಿನಿಗಳಿಂದ ಮಾಹಿತಿ ಪಡೆಯುತ್ತಿದ್ದಾರೆ.

ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಗೆ ಸಾಗಿಸಲಾಗಿದೆ.

error: Content is protected !!