ಮಂಗಳೂರು: ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸಾರ್ವಜನಿಕರಿಗೆ ವೈಯಕ್ತಿಕ ಸಮಸ್ಯೆಗಳನ್ನು ಶೀಘ್ರ ಪೂಜೆ ಮಾಡಿ ಪರಿಹರಿಸುವುದಾಗಿ ಜಾಹೀರಾತು ನೀಡಿ, ವ್ಯಕ್ತಿಯೊಬ್ಬರಿಗೆ ಸುಮಾರು 24.78ಲಕ್ಷ ರೂ. ಸೈಬರ್ ವಂಚನೆ ನಡೆಸಿದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ಮಂಗಳವಾರ(ನ.04) ಬಂಧಿಸಿದ್ದಾರೆ.

ವಾಸುವೇವ ಆರ್(32) ಬಂಧಿತ ಆರೋಪಿ.
ವ್ಯಕ್ತಿಯೊಬ್ಬರು ನೀಡಿದ ದೂರಿನಂತೆ ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಕಾರ್ಯಾಚರಣೆ ನಡೆಸಿದ ಪೊಲೀಸರು ಬಂಧಿತ ಆರೋಪಿಯಿಂದ ಕೃತ್ಯಕ್ಕೆ ಬಳಸಿದ 4 ಮೊಬೈಲ್ ಫೋನ್‌ಗಳು ಹಾಗೂ ರೂ. 20,300 ನಗದು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಬಂಧಿತ ಆರೋಪಿಯನ್ನು ನ.5 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದು ಬಂದಿದೆ.