ಬೆಂಗಳೂರು: ‘ಕೆಜಿಎಫ್’ ಸೇರಿದಂತೆ ಕನ್ನಡದ ಹಲವು ಸಿನಿಮಾಗಳಲ್ಲಿ ಖಳನಾಯಕನಾಗಿ ನಟಿಸಿ ಜನಪ್ರಿಯತೆ ಪಡೆದುಕೊಂಡಿದ್ದ ನಟ ಹರೀಶ್ ರಾಯ್ (55) ಅವರು ಇಂದು (ಗುರುವಾರ) ಕ್ಯಾನ್ಸರ್‌ನಿಂದ ನಿಧನರಾಗಿದ್ದಾರೆ.

ಹರೀಶ್ ರಾಯ್ ಅವರು ಕಳೆದ ಕೆಲ ವರ್ಷಗಳಿಂದ ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಥೈರಾಯ್ಡ್ ಕ್ಯಾನ್ಸರ್‌ನಿಂದ ಹೊಟ್ಟೆ ಉಬ್ಬರಗೊಂಡು ಹರೀಶ್ ರಾಯ್ ಅವರು ಗುರುತೇ ಸಿಗದಂತೆ ಆಗಿದ್ದರು.

ನಟ ಯಶ್, ದರ್ಶನ್, ಧ್ರುವ ಸರ್ಜಾ ಸೇರಿದಂತೆ ಇನ್ನೂ ಹಲವರು ಹರೀಶ್ ರಾಯ್ ಅವರಿಗೆ ಆರ್ಥಿಕ ಸಹಾಯ ಮಾಡಿದ್ದರು. ಆದರೆ ಚಿಕಿತ್ಸೆ ಫಲಿಸದೇ ಹರೀಶ್ ಅವರು ಇಂದು ನಿಧನ ಹೊಂದಿದ್ದಾರೆ. ಕನ್ನಡದಲ್ಲಿ ‘ಓಂ’, ‘ನಲ್ಲ’ ‘ಕೆಜಿಎಫ್’, ‘ಕೆಜಿಎಫ್ 2’ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿ ಜನಪ್ರಿಯತೆ ಪಡೆದುಕೊಂಡಿದ್ದರು.