sಮಂಗಳೂರು: ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ನೀಡಿದ್ದ ಆರೋಪದಲ್ಲಿ ವಾಹನ ಮಾಲಕರಿಗೆ ಮಂಗಳೂರು 4ನೇ ಜೆ.ಎಂ.ಎಫ್.ಸಿ ನ್ಯಾಯಾಲಯವು 26 ಸಾವಿರ ರೂ. ದಂಡ ವಿಧಿಸಿದ ಘಟನೆ ಬುಧವಾರ(ನ.05) ನಡೆದಿದೆ.

ವಾಹನ ಮಾಲೀಕರಾದ ಹತೀಜಮ್ಮ ಎಂಬವರು ಅವರ ಅಪ್ರಾಪ್ತ ವಯಸ್ಸಿನ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ್ದರು ಎಂದು ತಿಳಿದು ಬಂದಿದೆ. ಈ ಕುರಿತು ತಪಾಸಣೆಯ ವೇಳೆ ಮಂಗಳೂರು ಉತ್ತರ ಸಂಚಾರ ವಿಭಾಗದ ಪೊಲೀಸರು ಪತ್ತೆಹಚ್ಚಿ ಪ್ರಕರಣ ದಾಖಲಿಸಿಕೊಂಡಿದ್ದರು ಎಂದು ಹೇಳಲಾಗಿದೆ.

ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರು 4ನೇ ಜೆ.ಎಂ.ಎಫ್.ಸಿ ನ್ಯಾಯಾಲಯವು ವಾಹನದ ಮಾಲಕರಾದ ಹತೀಜಮ್ಮ ಅವರಿಗೆ 26 ಸಾವಿರ ರೂ. ದಂಡ ವಿಧಿಸಿ ಅದೇಶಿದೆ ಎಂದು ತಿಳಿದು ಬಂದಿದೆ.